ಸದಾಶಿವ ಆಯೋಗದ ವರದಿ ವಿರೋಧಿಸಿ ಜ.10ಕ್ಕೆ ಪ್ರತಿಭಟನೆ

ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಆಧಾರವಾಗಿಟ್ಟುಕೊಂಡು ಪರಿಶಿಷ್ಟ ಜಾತಿಗಳನ್ನು ಒಳಮೀಸಲಾತಿ ಹೆಸರಿನಲ್ಲಿ ವರ್ಗೀಕರಿಸಬಾರದು. ಸಾರ್ವಜನಿಕ ಚರ್ಚೆಗೆ ಒಳಪಡಿಸದೇ ಸಂಪುಟ ಉಪ ಸಮಿತಿಯು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬಾರದು ಎಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಒತ್ತಾಯಿಸಿದೆ. ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ಹೇರಲು ಜ.10ಕ್ಕೆ ಬೆಂಗಳೂರಿನಲ್ಲಿ 10 ಲಕ್ಷ ಜನರನ್ನು ಸೇರಿಸಿ ಪ್ರತಿಭಟನೆ ನಡೆಸಲು ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ನಿರ್ಣಯಿಸಲಾಯಿತು.