ಸದ್ಯಕ್ಕಿಲ್ಲ ಸಚಿವ ಸಂಪುಟ ವಿಸ್ತರಣೆ!

ಸದ್ಯಕ್ಕಿಲ್ಲ ಸಚಿವ ಸಂಪುಟ ವಿಸ್ತರಣೆ!

ಬೆಂಗಳೂರು: ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದ್ದು, ಸದ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಸಂಪುಟ ವಿಸ್ತರಣೆ ಸಂಬಂಧ ತಾವು ಪ್ರಸ್ತಾಪಿಸಿದ್ದು, ಅದರ ಅವಶ್ಯಕತೆ ಏನಿದೆ. ಈ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತಿಳಿಸುವುದಾಗಿ ವರಿಷ್ಠರು ತಿಳಿಸಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಹೈಕಮಾಂಡ್ ಶಾಕ್ ನೀಡಿದೆ.