ಸರ್ಕಾರಕ್ಕೆ ಪ್ರಜಾಪ್ರಭುತ್ವದ ಬಗ್ಗೆ ಟ್ಯೂಷನ್ ಅವಶ್ಯಕತೆ ಇದೆ : ರಾಹುಲ್ ಗಾಂಧಿ

ನವದೆಹಲಿ: ರಾಜ್ಯಸಭಾ ಸಂಸದರ ಅಮಾನತಿನ ವಿರುದ್ಧದ ಪ್ರತಿಭಟನೆಯನ್ನು ಮುಂದುವರೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸರ್ಕಾರಕ್ಕೆ ಪ್ರಜಾಪ್ರಭುತ್ವದ ಬಗ್ಗೆ 'ಟ್ಯೂಷನ್ ಅವಶ್ಯಕತೆ ಇದೆ' ಎಂದು ಟ್ವೀಟ್ ಮಾಡಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಚರ್ಚೆ ಮತ್ತು ಭಿನ್ನಾಭಿಪ್ರಾಯದ ಮಹತ್ವದ ಬಗ್ಗೆ ಮೋದಿ ಸರ್ಕಾರಕ್ಕೆ ಟ್ಯೂಷನ್ ಅಗತ್ಯವಿದೆ,' ಎಂದು ಅವರು ಹೇಳಿದರು.ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ನವೆಂಬರ್ 29 ರಂದು ಹನ್ನೆರಡು ಪ್ರತಿಪಕ್ಷದ ರಾಜ್ಯಸಭಾ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಭಾಗಗಳಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಯಿತು.
ಮಂಗಳವಾರ, ರಾಜ್ಯಸಭೆ ಮತ್ತು ಲೋಕಸಭೆಯ ಸಂಸದರು ಸಂಸತ್ತಿನ ಗಾಂಧಿ ಪ್ರತಿಮೆಯಿಂದ ವಿಜಯ್ ಚೌಕ್‌ಗೆ ಮಧ್ಯಾಹ್ನ 12:30 ಕ್ಕೆ ಮೆರವಣಿಗೆ ನಡೆಸಲಿದ್ದಾರೆ. ರಾಹುಲ್ ಗಾಂಧಿ ಪ್ರತಿಭಟನಾ ಮೆರವಣಿಗೆಯ ನೇತೃತ್ವ ವಹಿಸಲಿದ್ದಾರೆ.ಮೆರವಣಿಗೆ ನಂತರ ಪತ್ರಿಕಾಗೋಷ್ಠಿ ನಡೆಯಲಿದೆ. ಸಂಸತ್ತಿನ ಚಳಿಗಾಲದ ಅಧಿವೇಶನ, ವಿಶೇಷವಾಗಿ ರಾಜ್ಯಸಭೆ, ಅಮಾನತುಗಳ ಬಗ್ಗೆ ಪ್ರತಿಪಕ್ಷಗಳ ತೀವ್ರ ವಿರೋಧವಿದೆ.