ಸರ್ಕಾರದ ಆದೇಶ ಉಲ್ಲಂಘಿಸಿ ಹುಬ್ಬಳ್ಳಿ-ಧಾರವಾಡ ಪಾಲಿಕೆ ವಿಪಕ್ಷ ಕಚೇರಿಯಲ್ಲಿ ಟಿಪ್ಪು ಜಯಂತಿ ಆಚರಣೆ : ನೋಟಿಸ್ ಜಾರಿ
ಹುಬ್ಬಳ್ಳಿ : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಬೆಳಗ್ಗೆ ಟಿಪ್ಪು ಜಯಂತಿ ಆಚರಿಸಿದ ಬೆನ್ನಲ್ಲೇ, ಪಾಲಿಕೆಯ ವಿರೋಧ ಪಕ್ಷದ ನಾಯಕ ದೊರೈರಾಜ ಮಣಿಕುಂಟ್ಲ ಅವರು ಮಧ್ಯಾಹ್ನ ತಮ್ಮ ಕಚೇರಿಯಲ್ಲಿ, ಕಾಂಗ್ರೆಸ್ ಪಕ್ಷದ ಸದಸ್ಯರು ಹಾಗೂ ಪಕ್ಷದ ಮುಖಂಡರೊಂದಿಗೆ ಟಿಪ್ಪು ಜಯಂತಿ ಆಚರಿಸಿದ್ದಾರೆ.
ಈ ಹಿನ್ನೆಲೆ ಪಾಲಿಕೆ ಮೇಯರ್, ದೊರೈರಾಜ ಮಣಿಕುಂಟ್ಲ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದಾರೆ. ಟಿಪ್ಪು ಜಯಂತಿ ಆಚರಿಸಬಾರದೆಂದು ಸರ್ಕಾರದ ಆದೇಶವಿದ್ದರೂ ಟಿಪ್ಪು ಜಯಂತಿ ಆಚರಿಸಿದ್ದು ಯಾಕೆ..? ಇದಕ್ಕೆ ಕಾರಣ ನೀಡುವಂತೆ ನೋಟಿಸ್ ನೀಡಿದ್ದಾರೆ.
ಟಿಪ್ಪು ಚಿತ್ರಕ್ಕೆ ಪೂಜೆ ಸಲ್ಲಿಸಿದ ಮುಖಂಡರು, ಟಿಪ್ಪು ಪರ ಘೋಷಣೆಗಳನ್ನು ಕೂಗಿ, ಸಿಹಿ ಹಂಚಿ ಸಂಭ್ರಮಿಸಿದರು. ಪಾಲಿಕೆಯ ವಿರೋಧ ಪಕ್ಷದ ನಾಯಕ ದೊರೈರಾಜ ಮಣಿಕುಂಟ್ಲ ಅವರು ಮಧ್ಯಾಹ್ನ ತಮ್ಮ ಕಚೇರಿಯಲ್ಲಿ, ಕಾಂಗ್ರೆಸ್ ಪಕ್ಷದ ಸದಸ್ಯರು ಹಾಗೂ ಪಕ್ಷದ ಮುಖಂಡರೊಂದಿಗೆ ಟಿಪ್ಪು ಜಯಂತಿ ಆಚರಿಸಿದ್ದಾರೆ.