ಸರ್ಕಾರದಿಂದ ಪಿಯು ವಿದ್ಯಾರ್ಥಿಗಳಿಗೆ ಉಚಿತ ನೀಟ್

2022-23ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಉಚಿತವಾಗಿ ನೀಡುವ ನೀಟ್ ಹಾಗು ಜೆಇಇ ಪರೀಕ್ಷಾ ಪೂರ್ವ ತರಬೇತಿಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಹಿಂದುಳಿದ ವರ್ಗಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೆಂಗಳೂರು, ಮೈಸೂರು, ಕಲಬುರಗಿ ಮತ್ತು ಹುಬ್ಬಳ್ಳಿ-ಧಾರವಾಡ ನಗರಗಳಲ್ಲಿ ವಿಜ್ಞಾನ ವಿಭಾಗದಲ್ಲಿ ಪಿಯುಸಿ / 10+1 ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.