ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಸರ್ಕಾರಿ ಇಲಾಖೆಗಳಲ್ಲಿ 30 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಖರ್ಗೆ, 75,000 ಹುದ್ದೆಗಳಷ್ಟೇ ಪ್ರಧಾನಿ ಭರ್ತಿ ಮಾಡಿದ್ದಾರೆ. ಕೇಂದ್ರ ಸಚಿವಾಲಯ ಸೇವೆ ಕಚೇರಿಗಳಲ್ಲಿ 1,600ರಷ್ಟು ಹುದ್ದೆಗಳು ಖಾಲಿ ಇವೆ ಎಂಬ ಮಾಧ್ಯಮ ವರದಿಯನ್ನು ಉದ್ದೇಶಿಸಿ ಖರ್ಗೆ ಹೇಳಿಕೆ ನೀಡಿದ್ದಾರೆ.