ಸರ್ಕಾರಿ ಜಾಗ ಒತ್ತುವರಿ ಮಾಡಿಕೊಂಡವರಿಗೆ ಬಿಗ್ ಶಾಕ್: ಒತ್ತುವರಿ ಮಾಡಿದ್ರೇ ಕಠಿಣ ಕ್ರಮ- ಸಚಿವ ಆರ್.ಅಶೋಕ್ ಎಚ್ಚರಿಕೆ

ಬೆಳಗಾವಿ: ವಸತಿ ಯೋಜನೆಗಳಿಗಾಗಿ 530 ಎಕರೆ ಜಾಗವನ್ನು ವಸತಿ ಇಲಾಖೆಗೆ ಕಂದಾಯ ಇಲಾಖೆ ವತಿಯಿಂದ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಅವರು ತಿಳಿಸಿದರು. ಪರಿಷತ್‍ನಲ್ಲಿ ಸದಸ್ಯ ಬಿ.ಕೆ.ಹರಿಪ್ರಸಾದ್ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು ರಾಜ್ಯದಲ್ಲಿ ಒಟ್ಟು 14,27,195 ಎಕರೆ ಸರಕಾರಿ ಜಮೀನು ಒತ್ತುವರಿಯಾಗಿದ್ದು,ಒತ್ತುವರಿ ತೆರವುಗೊಳಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾರ್ಯಪಡೆಯನ್ನು ರಚಿಸಲಾಗಿದೆ.
ಅದರಂತೆ ಎಲ್ಲ ಜಿಲ್ಲಾಧಿಕಾರಿಗಳು ಕಾಲಬದ್ಧ ಕ್ರಿಯಾಯೋಜನೆ ಸಿದ್ದಪಡಿಸಿಕೊಂಡಿದ್ದು,ಒತ್ತುವರಿ ಆಗಿರುವ ಸರಕಾರಿ ಜಮೀನುಗಳನ್ನ ತೆರವುಗೊಳಿಸಲು ಕ್ರಮವಹಿಸುತ್ತಿದ್ದಾರೆ ಎಂದು ವಿವರಿಸಿದ ಅವರು ಸರಕಾರಿ ಜಾಗ ಒತ್ತುವರಿ ಮಾಡಿಕೊಂಡವರ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ;ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.ರಾಜ್ಯದಲ್ಲಿ 1939672-21.09 ಎಕರೆ/ಗುಂಟೆ ಗೋಮಾಳ ಜಮೀನು ಇರುವುದನ್ನು ಸದನಕ್ಕೆ ತಿಳಿಸಿದರು.