ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಲು ಮುಂದಾದ ರಾಜ್ಯ ಸರ್ಕಾರ

ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ ನೀಡಲು ಮುಂದಾಗಿರುವ ಸರ್ಕಾರ ನೌಕರರ ಬೇಡಿಕೆಗೆ ಅಸ್ತು ಎನ್ನುವ ಸಾಧ್ಯತೆ ಇದೆ. ಇವತ್ತು ಬಹುನಿರೀಕ್ಷಿತ 7ನೇ ವೇತನ ಆಯೋಗ ರಚನೆಯಾಗುವ ಸಾಧ್ಯತೆಯಿದ್ದು, ಶೇಕಡ 40ರಷ್ಟು ವೇತನ ಹೆಚ್ಚಳ ನಿರೀಕ್ಷೆಯಲ್ಲಿ ನೌಕರರಿದ್ದಾರೆ.

ವೇತನ ಆಯೋಗ ರಚನೆ ಮಾಡುವುದಾಗಿ ಭರವಸೆ ನೀಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಆಯೋಗ ರಚನೆಗೆ ಸಂಬಂಧಿಸಿದಂತೆ ಸಭೆ ನಡೆಸಿದ್ದಾರೆ.

ಈ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ. ಮೊದಲ ಬಾರಿಗೆ 5 ವರ್ಷದೊಳಗೆ ಹೊಸ ವೇತನ ಆಯೋಗ ರಚನೆ ಮಾಡಲು ಸರ್ಕಾರ ಮುಂದಾಗಿದೆ. ಆಯೋಗದ ಶಿಫಾರಸಿನಿಂದ 13.5 ಲಕ್ಷ ಹಾಲಿ ಮತ್ತು ನಿವೃತ್ತ ನೌಕರರಿಗೆ ಅನುಕೂಲವಾಗಲಿದೆ. ವೇತನ ಏರಿಕೆಯಿಂದ ಸರ್ಕಾರಕ್ಕೆ ವಾರ್ಷಿಕ 12,500 ಕೋಟಿ ರೂ. ಹೊರೆಯಾಗಬಹುದು ಎಂದು ಹೇಳಲಾಗಿದೆ.