ಸವದತ್ತಿ ಯಲ್ಲಮ್ಮನ ಗುಡ್ಡದ ಜಾತ್ರೆಯಿಂದ ಹಿಂತಿರುಗುತ್ತಿದ್ದಾಗ ದುರಂತ; ಸ್ಥಳದಲ್ಲೇ ಮೂವರು ಸಾವು

ಬಾಗಲಕೋಟೆ: ಸವದತ್ತಿ ಯಲ್ಲಮ್ಮನ ಗುಡ್ಡದ ಜಾತ್ರೆಯಿಂದ ಹಿಂತಿರುಗುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮುಧೋಳ ತಾಲೂಕಿನ ಕುಳಲಿ ಗ್ರಾಮದ ನಿರಾಣಿ ಸಕ್ಕರೆ ಕಾರ್ಖಾನೆ ಬಳಿ ನಡೆದಿದೆ.
ಟ್ರ್ಯಾಕ್ಟರ್ ಚಾಲಕರಿಬ್ಬರ ಹುಡುಗಾಟಿಕೆಯಿಂದ ಈ ಘಟನೆ ನಡೆದಿದೆ. ರಸ್ತೆಯಲ್ಲಿ ವೇಗವಾಗಿ ಟ್ರಾಕ್ಟರ್ ಚಲಾಯಿಸಿದ್ದಾರೆ. ಓವರ್ಟೇಕ್ ಮಾಡುವ ಭರಾಟೆಯಲ್ಲಿ ಅಪಘಾತ ಸಂಭವಿಸಿದೆ. ಓವರ್ಟೇಕ್ ಮಾಡಲು ಹೋಗಿ ಇನ್ನೊಂದು ಟ್ರ್ಯಾಕ್ಟರ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರ ಸಾವನ್ನಪ್ಪಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ಮೂವರ ಕಾಲು ಪ್ರ್ಯಾಕ್ಚರ್ ಆಗಿದೆ.
ಹನಮಂತ ಹುನಸಿಕಟ್ಟಿ ಎಂಬಾತನಿಗೆ ಸೇರಿದ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಮೃತರಾದ ಗೋವಿಂದ್ ಪಾಟೀಲ್(20), ಹನಮಂತ ಬೊಮ್ಮಕ್ಕನವರ(20) ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದವರು. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಫ್ರ್ಯಾಕ್ಚರ್ಗೆ ಒಳಗಾದವರನ್ನು , ಮುಧೋಳ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟಾರೆ ಗಂಭೀರ ಅಪಘಾತದಲ್ಲಿ ಹತ್ತಕ್ಕೂ ಹೆಚ್ಚು ಜನರು ಸಣ್ಣಪುಟ್ಟ ಗಾಯಗಳಿಗೆ ತುತ್ತಾಗಿದ್ದಾರೆ. ಮುಧೋಳ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ಘಟನೆ ನಡೆದಿದ್ದು, ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್