ಸವದತ್ತಿ ಶಾಸಕ ಆನಂದ ಮಾಮನಿ ವಿಧಿವಶ ಹಿನ್ನೆಲೆ; ಇಂದು ನಡೆಯಬೇಕಿದ್ದ ಕಿತ್ತೂರು ಉತ್ಸವ ನಾಳೆಗೆ ಮುಂದೂಡಿಕೆ

ಬೆಳಗಾವಿ: ಇಂದಿನಿಂದ ಬೆಳಗಾವಿ ಜಿಲ್ಲೆಯ ಚನ್ನಮ್ಮನ್ನ ಕಿತ್ತೂರಿನಲ್ಲಿ ಮೂರು ದಿನಗಳ ಕಾಲ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರವು ಕಿತ್ತೂರು ಉತ್ಸವಕ್ಕೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿತ್ತು. ಆದರೆ
ಸವದತ್ತಿ ಯಲ್ಲಮ
ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಪ್ರಕಟಣೆ ಮೂಲಕ ಅವರು ಕಿತ್ತೂರು ಉತ್ಸವ ನಾಳೆಗೆ ಮುಂದೂಡಿದ್ದಾರೆ ಎಂದು ತಿಳಿಸಿದ್ದಾರೆ. ಕಿತ್ತೂರು ಉತ್ಸವ ಆಚರಣೆ ಕುರಿತು ಜಿಲ್ಲಾಡಳಿತ ಸರ್ಕಾರ ಆದೇಶಕ್ಕಾಗಿ ಕಾಯುತ್ತಿದ್ದರು. ಇಂದಿನಿಂದ ಮೂರು ದಿನಗಳ ಕಾಲ ಕಿತ್ತೂರು ಉತ್ಸವ ನಡೆಯಬೇಕಿತ್ತು. ಇದೇ ಮೊದಲ ಬಾರಿಗೆ ರಾಜ್ಯಮಟ್ಟದ ಕಿತ್ತೂರು ಉತ್ಸವಕ್ಕೆ ಸರ್ಕಾರ ನಿರ್ಧಾರ ಮಾಡಿತ್ತು. ಸಂಜೆ ಉತ್ಸವದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿಯಾಗಬೇಕಿತ್ತು.
ಈಗಾಗಲೇ ಜಿಲ್ಲಾಡಳಿತ ಕಿತ್ತೂರು ಉತ್ಸವಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿತ್ತು. ಸವದತ್ತಿ ಶಾಸಕ ಆನಂದ ಮಾಮನಿ ವಿಧಿವಶ ಹಿನ್ನೆಲೆಯಲ್ಲಿ ಉತ್ಸವ ನಾಳೆಗೆ ಮುಂದೂಡಲಾಗಿದೆ.
್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ವಿಧಿವಶರಾದ ಹಿನ್ನೆಲೆಯಲ್ಲಿ ಕಿತ್ತೂರು ಉತ್ಸವ ಮುಂದೂಡಲಾಗಿದೆ.