ಸಹಕಾರ ಸಪ್ತಾಹ ಕಾರ್ಯಕ್ರಮ
ಧಾರವಾಡ : ಅಖಿಲ ಭಾರತ ಸಹಕಾರ ಸಪ್ತಾಹ ಧಾರವಾಡ ನಗರದ ಕೆ ಎಂ ಎಫ್ ಆವರಣದಲ್ಲಿ ಸಹಕಾರ ಧ್ವಜಾರೋಹಣ ಹಾಗೂ ಗೋ ಪೂಜೆಯನ್ನು ನೇರವೇರಿಸಿ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಸಹಕಾರ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
69 ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ ಧಾರವಾಡ ಕೆ ಎಂ ಎಫ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು. ಸಹಕಾರ ಸಪ್ತಾಹ ಸಮಾರಂಭಕ್ಕೆ ಜನಸಾಗರವೇ ಹರಿದುಬಂದ ದೃಶ್ಯ ಕಂಡು ಬಂತು. ಜನಪದ ಕಲಾವಿದರು ಜನಪದ ಗೀತೆಗಳನ್ನು ಹಾಡಿ ಗಮನ ಸೆಳೆದರು.
ಕರ್ನಾಟಕ ಸಹಕಾರ ಹಾಲು ಮಹಾಮಂಡಳ ನಿ., ಬೆಂಗಳೂರು ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿ, ಧಾರವಾಡ, ಧಾರವಾಡ ಜಿಲ್ಲಾ ಸಹಕಾರ ಯೂನಿಯನ್, ಕೆಸಿಸಿ ಬ್ಯಾಂಕ್ ಲಿ. ಧಾರವಾಡ. ಜಿಲ್ಲೆಯ ವಿವಿಧ ಸರಕಾರ ಸಂಘಗಳ ಹಾಗೂ ಸಹಕಾರ ಇಲಾಖೆ ನೇತೃತ್ವದಲ್ಲಿ 69 ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ 2022 ಹಮ್ಮಿಕೊಳ್ಳಲಾಗಿದೆ.
ಶಾಸಕ ಅಮೃತ ದೇಸಾಯಿ, ಕಲಘಟಗಿ ಶಾಸಕ ಸಿ ಎಂ ನಿಂಬಣ್ಣವರ, ಕೆಎಂಎಫ್ ಅಧ್ಯಕ್ಷ ಶಂಕರ ಮುಗದ ಸೇರಿದಂತೆ ಹಲವರು ಇದ್ದರು.