ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ: ಅ. 19 ಕ್ಕೆ ಸಿಎಂ ನಿವಾಸದ ಮುಂದೆ ಪ್ರತಿಭಟನೆ

ಬೆಂಗಳೂರು: ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 19 ಕ್ಕೆ ಸಿಎಂ ನಿವಾಸದ ಮುಂದೆ ಪ್ರತಿಭಟನೆ ಮಾಡಲಾಗುತ್ತದೆ ಎಂದು ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್ ಸಂಘ ಎಚ್ಚರಿಕೆ ನೀಡಿದೆ. ಸಾರಿಗೆ ನೌಕರರ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿದ ಮುಖಂಡರು, ಸಾರಿಗೆ ನೌಕರರು ಎದುರಿಸುತ್ತಿರುವ ಹಲವು ಬೇಡಿಕೆಗಳನ್ನ ಸರ್ಕಾರದ ಮುಂದೆ ಇಡಲಾಗಿದೆ.
ಆ ಎಲ್ಲಾ ನೌಕರರಿಗೆ ವೇತನ ಪರಿಷ್ಕರಣೆ ಆಗಬೇಕು, ಎರಡು ಹಂತದ ಆಡಳಿತ ವ್ಯವಸ್ಥೆ ಜಾರಿಯಾಗಬೇಕು. ಏಕರೂಪ ಶಿಸ್ತು ಕ್ರಮ ಜಾರಿಯಾಗಬೇಕು, ನಿವೃತ್ತಿ, ನಿಧನ ಮತ್ತು ಸ್ವಯಂ ನಿವೃ ಕಾರ್ಮಿಕರ ಬಾಕಿ ಹಣ ಬಿಡುಗಡೆ ಆಗಬೇಕು. ವಜಾಗೊಂಡ ನೌಕರರನ್ನ ಮರುನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿದ್ರು. ಈ ಸಂಬಂಧ ಸರ್ಕಾರ ಸಭೆ ನಡೆಸಿ ಬೇಡಿಕೆ ಈಡೇರಿಸಬೇಕು ಇಲ್ಲವಾದಲ್ಲಿ ಅಕ್ಟೋಬರ್ 19 ರಂದು ಮುಖ್ಯಮಂತ್ರಿಗಳ ಅಧಿಕೃತ ನಿವಾಸದ ಮುಂದೆ ಬೃಹತ್ ಪ್ರತಿಭಟನೆ ಮಾಡೋದಾಗಿ ಎಚ್ಚರಿಕೆ ನೀಡಿದ್ಧಾರೆ.