ಸಾರಿಗೆ ಬಸ್ - ಕಾರಿನ ನಡುವೆ ಭೀಕರ ರಸ್ತೆ ಅಪಘಾತ: ಮೂವರು ಮಹಿಳೆಯರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ
ದಾವಣಗೆರೆ: ಕೆಎಸ್‌ಆರ್ ಟಿಸಿ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ( Road Accident ) ಸಂಭವಿಸಿ, ಮೂವರು ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಸವಳಂಗ - ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿಯ ನ್ಯಾಮತಿ ಬಳಿಯಲ್ಲಿ ನಡೆದಿದೆ.
ನ್ಯಾಮತಿ ತಾಲೂಕಿನ ಹಳೆ ಜೋಗದಲ್ಲಿ ಇಂದು ನಡೆದಂತ ಆರತಕ್ಷತೆ ಕಾರ್ಯಕ್ರಮ ಮುಗಿಸಿಕೊಂಡು ಕಾರಿನಲ್ಲಿ ತೆರಳುತ್ತಿದ್ದಂತ ಸಂದರ್ಭದಲ್ಲಿ, ಶಿಕಾರಿಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಂತ ಕೆ ಎಸ್ ಆರ್ ಟಿಸಿ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿವೆ. ಇದರಿ ಕಾರಿನಲ್ಲಿದ್ದಂತ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಡೆಹಳ್ಳಿಯ ಶಾರದಮ್ಮ, ಸುಮಾ ಹಾಗೂ ಆಶಾ ಎಂಬುವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಈ ದುರ್ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವಂತ ಕಾರು ಚಾಲಕ ಹಾಗೂ ಮತ್ತೋರ್ವ ಮಹಿಳೆಯನ್ನು ಶಿವಮೊಗ್ಗಕ್ಕೆ ಚಿಕಿತ್ಸೆಗಾಗಿ ಕಳುಹಿಸಿಕೊಡಲಾಗಿದೆ.
ಕೆ ಎಸ್ ಆರ್ ಟಿಸಿ ಹಾಗೂ ಕಾರಿನ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಅಪಘಾತದಿಂದ ಒಂದು ಗಂಟೆಗೂ ಹೆಚ್ಚುಕಾರ ಸವಳಂಗ - ಶಿವಮೊಗ್ಗ ಹೆದ್ದಾರಿ ಸಂಚಾರಕ್ಕೆ ತೊಂದರೆಯುಂಟಾಗಿತ್ತು. ಸ್ಥಳಕ್ಕೆ ಆಗಮಿಸಿದಂತ ಪೊಲೀಸರು, ಸರಾಗ ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.