ಸಾರ್ವತ್ರಿಕ ಸಮಸ್ಯೆಗಳಿದ್ದರೆ ತ್ವರಿತವಾಗಿ ಬಗೆಹರಸಿ - ರಮೇಶ್ ಕೋನರಡ್ಡಿ

ಶಿಗ್ಗಾವಿ :- ಸಾರ್ವರ್ತಿಕ ಸಮಸ್ಯೆಗಳಿದ್ದರೆ ಸಾಧ್ಯವಾದಷ್ಟು ತ್ವರಿತವಾಗಿ ಬಗೆಹರಿಸಿ ಸಮಸ್ಯೆ ಹೊತ್ತು ಕಚೇರಿಗೆ ಬರುವ ಸಾರ್ವಜನಿಕರನ್ನು ನಿರ್ಲಕ್ಷ್ಯ ಮಾಡಬೇಡಿ. ನಿಮ್ಮಿಂದಾಗುವ ಕೆಲಸವನ್ನು ತಕ್ಷಣ ಮಾಡಿಕೊಡಿ ಎಂದು ಮುಖ್ಯಮಂತ್ರಿಗಳ ವಿಶೇಷ ತನಿಖಾಧಿಕಾರಿ ರಮೇಶ್ ಕೊನರೆಡ್ಡಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಅವರು ಪಟ್ಟಣದ ತಹಶಿಲ್ದಾರ ಕಚೇರಿಯಲ್ಲಿ ನೂರಾರು ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದರು.
ಕ್ಷೇತ್ರದ ಅಭಿವೃದ್ಧಿಗೆ ಮುಖ್ಯಮಂತ್ರಿಗಳು ನೀಡಿದ ಯೋಜನೆಗಳು ಸಮರ್ಪಕವಾಗಿ ಸಕಾಲಕ್ಕೆ ಅಧಿಕಾರಿಗಳು ಅನುಷ್ಠಾನಗೊಳಿಸಬೇಕು ಜನತೆಗೆ ಸಾರ್ವಜನಿಕರ ಸಮಸ್ಯೆ ನಿರ್ಲಕ್ಷ್ಯ ಮಾಡದೇ ಸ್ಪಂದಿಸಿ ಕೆಲಸ ಮಾಡಬೇಕು. ಬೇಸಿಗೆ ದಿನಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿಗೆ ತೊಂದರೆ ಆಗದಂತೆ ಮುಂಜಾಗೃತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಮನೆ ಹಾಗೂ ಬೆಳೆ ಹಾನಿ ಪರಿಹಾರ ಬಂದಿಲ್ಲ ಎಂಬ ಸಾರ್ವಜನಿಕರ ದೂರನ್ನು ಪರಿಶೀಲಿಸಿ ತಕ್ಷಣ ಕ್ರಮಕೈಗೊಳ್ಳಬೇಕು ರೆಡ್ಡಿ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ರಸ್ತೆ ಆಸ್ಪತ್ರೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಸಕಾಲಕ್ಕೆ ಪೂರೈಸುವಂತಹ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಾರ್ಯಪ್ರವೃತ್ತರಾಗಬೇಕು ಈಗಾಗಲೇ ಮನೆ ಕಳೆದುಕೊಂಡವರಿಗೆ ಪರಿಹಾರ ಕಲ್ಪಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.
ಬೆಳೆ ಹಾನಿ ಹಾಗೂ ಸರ್ಕಾರ ಪರಿಹಾರ ನೀಡದೇ ತಾಂತ್ರಿಕ ಸಮಸ್ಯೆಯಿಂದ ಕೆಲ ರೈತರಿಗೆ ಬಂದಿಲ್ಲ. ಸೀಗ್ರಸ್ ಅವರ ಖಾತೆಗೆ ಜಮಾ ಆಗಲಿದೆ ತಾಂತ್ರಿಕ ಸಮಸ್ಯೆಯಿಂದ ನೆರೆಯಲ್ಲಿ ಮನೆ ಕಳೆದುಕೊಂಡ ಫಲಾನುಭವಿಗಳಿಗೆ ಮನೆ ಕಟ್ಟಿಕೊಳ್ಳಲು ಎದುರಾದ ಅಡ್ಡಿ-ಆತಂಕಗಳನ್ನು ಸರಿಪಡಿಸಲಾಗಿದೆ ಸಾಮಾಜಿಕ ಭದ್ರತೆ ಯೋಜನೆಗಳನ್ನು ಅರ್ಹರಿಗೆ ತಲುಪಿಸಬೇಕು ಆ ಮೂಲಕ ಸಮಸ್ಯೆಗಳನ್ನು ನಿವಾರಿಸಬೇಕು ಎಂದು ತಾಲೂಕು ಆಡಳಿತಕ್ಕೆ ಸೂಚಿಸಿದರು. ಬಂಕಾಪುರ ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾತ್ರಿ ವೈದ್ಯರಿಲ್ಲದೆ ಎದುರಿಸುವ ಅನಾನುಕೂಲತೆ ಕುರಿತು ದೂರಿದ ಸಾರ್ವಜನಿಕರಿಗೆ ಸ್ಪಂದಿಸಿದ ಕೋನರೆಡ್ಡಿ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ದೂರವಾಣಿ ಕರೆಮಾಡಿ ಕಡ್ಡಾಯವಾಗಿ ಆಸ್ಪತ್ರೆಯ ವೈದ್ಯರನ್ನು ರಾತ್ರಿ ವೇಳೆ ಕರ್ತವ್ಯಕ್ಕೆ ನಿಯೋಜನೆ ಮಾಡಿ ಆದೇಶ ಮಾಡುವಂತೆ ಸೂಚಿಸಿದರು.
ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಮನೋಜ್ ನಾಯಕ್ ಅವರ ವಿರುದ್ಧ ದೂರುಗಳು ಪರಿಶೀಲಿಸಿ ಕ್ರಮ ವಹಿಸುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕ ಅಧ್ಯಕ್ಷ ಶಿವಾನಂದ ಮ್ಯಾಗೇರಿ, ಪುರಸಭೆ ಮಾಜಿ ಅಧ್ಯಕ್ಷ ಶ್ರೀಕಾಂತ ಬುಳ್ಳಕ್ಕನವರ, ಕೆಸಿಸಿ ಬ್ಯಾಂಕ್ ನಿರ್ದೇಶಕ ಗಂಗಣ್ಣ ಸಾತಣ್ಣವರ, ತಿಪ್ಪಣ್ಣ ಸಾತಣ್ಣವರ, ಶಶಿಧರ ಹೊಣ್ಣಣ್ಣವರ, ಶಿವರಾಜ ರಾಯಣ್ಣವರ, ವಿಶ್ವನಾಥ ಹರವಿ ಇನ್ನೂ ಹಲವಾರು ಮುಖಂಡರು ಉಪಸ್ಥಿತರಿದ್ದರು.