ಸಾಲಬಾಧೆ:ಪಾಳಾ ಗ್ರಾಮದಲ್ಲಿ ರೈತ ಆತ್ಮಹತ್ಯೆ

ಕಲಬುರಗಿ,ಅ.3-ಸಾಲಬಾಧೆ ತಾಳದೆ ನೇಣು ಹಾಕಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಪಾಳಾ ಗ್ರಾಮದಲ್ಲಿ ನಿನ್ನೆ ಬೆಳಿಗ್ಗೆ ನಡೆದಿದೆ.
ಪಾಳಾ ಗ್ರಾಮದ ಸುಭಾಷ ದೊಡ್ಡಪ್ಪ ದಂಡೋತಿ (42) ಆತ್ಮಹತ್ಯೆ ಮಾಡಿಕೊಂಡ ರೈತ.
ನಿನ್ನೆ ಬೆಳಿಗ್ಗೆ ಮನೆಯವರಿಗೆ ಹೊಲಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿ ಹೊಲದಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
4 ಎಕರೆ 30 ಗುಂಟೆ ಜಮೀನಿದ್ದು, ಕಾರ್ಪೋರೇಶನ್ ಬ್ಯಾಂಕ್ ನಲ್ಲಿ 7 ಲಕ್ಷ ಮತ್ತು ಖಾಸಗಿಯಾಗಿ 2 ಲಕ್ಷ ಸೇರಿದಂತೆ ಒಟ್ಟು 9 ಲಕ್ಷ ಸಾಲವಾಗಿತ್ತು ಎಂದು ತಿಳಿದುಬಂದಿದೆ.
ಸಾಲ ತೀರಿಸುವುದು ಹೇಗೆ ಎಂಬ ಚಿಂತೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಈ ಸಂಬಂಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆದಿದೆ.