ಸಾಹಿತ್ಯ ಸಮ್ಮೇಳನಕ್ಕೆ ಕವಿವಿ ಪತ್ರಿಕೋದ್ಯಮ ವಿಭಾಗಕ್ಕೆ ಆಹ್ವಾನ

ಸಾಹಿತ್ಯ ಸಮ್ಮೇಳನಕ್ಕೆ ಕವಿವಿ ಪತ್ರಿಕೋದ್ಯಮ ವಿಭಾಗಕ್ಕೆ ಆಹ್ವಾನ

ಇದೇ ಮಾರ್ಚ್ 26, ಮತ್ತು 27ರಂದು ಧಾರವಾಡದಲ್ಲಿ 
ನಡೆಯಲಿರುವ 14ನೆ ಜಿಲ್ಲಾ ಸಾಹಿತ್ಯ ಸಮ್ಮೇಳನಕ್ಕೆ ಅಗಮಿಸುವಂತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್  ಅಧ್ಯಕ್ಷ ಪ್ರೊ. ಲಿಂಗರಾಜ ಅಂಗಡಿಯವರು  ಕವಿವಿ ಪ್ರತಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗಕ್ಕೆ ಭೇಟಿ ನೀಡಿ, ವಿಭಾಗದ ಮುಖ್ಯಸ್ಥ ಡಾ, ಜೆ.ಎಂ.ಚಂದುನವರ ಹಾಗೂ ವಿದ್ಯಾರ್ಥಿಗಳಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದರು.

ಇದೇ ವೇಳೆ ಸಾಹಿತ್ಯ ಮತ್ತು ಸಾಂಸ್ಕೃತಿಕ ನಗರಿ ಧಾರವಾಡದಲ್ಲಿ ನಡೆಯಲಿರುವ ಸಾಹಿತ್ಯ ಜಾತ್ರೆಗೆ ಭರದ ಸಿದ್ಧತೆ ನಡೆದಿರು ಬಗ್ಗೆ ಮಾಹಿತಿ ಹಂಚಿಕೊಂಡರು.