ಸಿ.ಟಿ.ರವಿ ಮನೆಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ

ಸಿ.ಟಿ.ರವಿ ಮನೆಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ

ಚಿಕ್ಕಮಗಳೂರು: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ರಂಗೇರಿದೆ. ಈಗಾಗಲೇ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳ ನಾಯಕರ ಪ್ರಚಾರದ ಭರಾಟೆ ಶುರುವಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಪ್ರವಾಸ ಕೈಗೊಂಡಿದ್ದರು.ಶೃಂಗೇರಿ, ಚಿಕ್ಕಮಗಳೂರು, ಹಾಸನಕ್ಕೆ ಭೇಟಿ ನೀಡುತ್ತಿದ್ದಾರೆ.ಶೃಂಗೇರಿ ದೇವಾಲಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭೇಟಿ ನೀಡಿದ್ದಾರೆ.

ಇಂದು ಬೆಳಗ್ಗೆ ಶಾರದಾಂಬೆಯ ದರ್ಶನ ಪಡೆದರು. ಈ ವೇಳೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶೋಭಾ ಕರಂದ್ಲಾಜೆ ಹಾಗೂ ಇತರ ನಾಯಕರು ಭಾಗಿಯಾಗಿದ್ದಾರೆ.

ಶೃಂಗೇರಿ ಶಾರದಾಂಬೆಯ ದರ್ಶನ ಪಡೆದು ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರ ನಿವಾಸಕ್ಕೆ ಆಗಮಿಸಿದರು. ಶೋಭಾ ಕರಂದ್ಲಾಜೆ, ನಳಿನ್ ಕುಮಾರ್ ಕಟೀಲ್, ಎಂ.ಎಲ್.ಸಿ ಪ್ರಾಣೆಶ್ ಭಾಗಿಯಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಬಿಜೆಪಿಯಿಂದ ಬೈಕ್‌ ರ್ಯಾಲಿ ನಡೆಯುತ್ತಿದೆ. ಶಾಸಕ ಸಿ.ಟಿ ರವಿ ನಿವಾಸದಿಂದ ಬಿಜೆಪಿ ಕಚೇರಿವರೆಗೂ ಬೈಕ್‌ ರ್ಯಾಲಿ ನಡೆಸಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌, ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಭಾಗಿಯಾಗಿದ್ದಾರೆ.