ಸಿಎಂ ಜತೆ ಚರ್ಚಿಸಿ ಹಾಲಿನ ದರ ಏರಿಕೆಗೆ

ಬೆಂಗಳೂರು,ಅ.19;- ಗ್ರಾಹಕರಿಗೆ ಮಾರಾಟ ಮಾಡುವ ಹಾಲಿನ ದರ ಪರಿಷ್ಕರಣೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲಿನ ದರ ಹೆಚ್ಚಳ ಮಾಡಬೇಕೆಂಬ ಪ್ರಸ್ತಾವನೆಯಿದೆ. ಆ ಬಗ್ಗೆ ಇನ್ನು ಯಾವುದೇ ತೀರ್ಮಾನ ಆಗಿಲ್ಲ. ಸಿಎಂ ಗಮನಕ್ಕೆ ಈ ವಿಚಾರ ಬಂದಿದ್ದು, ಸೂಕ್ತ ಸಮಯದಲ್ಲಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
14 ಹಾಲು ಉತ್ಪಾದಕ ಸಹಕಾರ ಸಂಘಗಳು ಹಾಲಿನ ದರ ಹೆಚ್ಚಳಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸಿವೆ. ಗ್ರಾಹಕರಿಗೆ ಮಾರಾಟ ಮಾಡುವ ಹಾಲಿನ ದರ ಹೆಚ್ಚಳ ಮಾಡಿದರೆ ರೈತರಿಂದ ಖರೀದಿಸುವ ಹಾಲಿಗೆ ಕೊಡುತೇವೆ ಎಂದು ಸಂಘಗಳು ಮನವಿ ಮಾಡಿವೆ.
ಆದರೆ ಗ್ರಾಹಕರು ಹಾಲಿನ ದರ ಹೆಚ್ಚಳ ಮಾಡದಂತೆ ಒತ್ತಾಯ ಮಾಡಿವೆ. ಈ ಬಗ್ಗೆ ಚರ್ಚಿಸಿ ಮುಖ್ಯಮಂತ್ರಿ ಸೂಕ್ತ ಕೈಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.