'ಸಿಎಂ ಧೈರ್ಯ ಪ್ರದರ್ಶಿಸಿದರೆ ಕೇಂದ್ರದಿಂದ ಅನುದಾನ ಸಿಗುತ್ತದೆ' : 'ನಾಯಿ ಮರಿ' ಹೇಳಿಕೆಗೆ ಸಿದ್ದು ಸಮರ್ಥನೆ

ಬೆಂಗಳೂರು : ಪ್ರಧಾನಿ ಮೋದಿ ಮುಂದೆ ಬೊಮ್ಮಾಯಿ ನಾಯಿಮರಿಯಂತೆ ಇರ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ.
ಇದೀಗ ತಮ್ಮ ಹೇಳಿಕೆಗೆ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಮತ್ತೆ ಸಮರ್ಥನೆ ನೀಡಿದ್ದಾರೆ.
ಸೋನಿಯಾ ಗಾಂಧಿ, ರಾಹುಲ್ ಮುಂದೆ ಸಿದ್ದರಾಮಯ್ಯ ಇಲಿ ತರ ಇರುತ್ತಾರೆ ಎಂಬ ಸಚಿವ ಶ್ರೀರಾಮುಲು ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಅವನೊಬ್ಬ ಪೆದ್ದ , ಆತನ ಬಗ್ಗೆ ಮಾತನಾಡೋಲ್ಲ ಎಂದರು.ಸಿಎಂ ಬೊಮ್ಮಾಯಿ ಬಗ್ಗೆ ಲಘುವಾಗಿ ಮಾತನಾಡಿಲ್ಲ, ನಮ್ಮ ಹಳ್ಳಿ ಭಾಷೆಯಲ್ಲಿ ಹಾಗೆ ಮಾತನಾಡುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು, ಇದೀಗ ಮತ್ತೊಮ್ಮೆ ತಮ್ಮ ಹೇಳಿಕೆಗೆ ಸಮರ್ಥನೆ ನೀಡಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮುಂದೆ ನಾಯಿ ಮರಿಯಂತೆ ಇರ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಸಿಎಂ ಬಸವರಾಜ ಬೊಮ್ಮಾಯಿಗೆ ಧೈರ್ಯವಿದ್ರೆ ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರಲಿ, ಕಾಂಗ್ರೆಸ್ ಧಮ್ ಬಗ್ಗೆ ಪ್ರಶ್ನೆ ಮಾಡುವ ಸಿಎಂ ಬೊಮ್ಮಾಯಿ,ಮೋದಿ ಮುಂದೆ ನಾಯಿ ಮರಿಯಂತೆ ಇರ್ತಾರೆ. ಬೊಮ್ಮಾಯಿಗೆ ಧಮ್, ತಾಕತ್ ಇದ್ರೆ ಕೇಂದ್ರದಿಂದ ಅನುದಾನ ತನ್ನಿ ಎಂದು ಸಿದ್ದರಾಮಯ್ಯ ಹೇಳಿದ್ದರು.