ಕೊಪ್ಪಳ ಗವಿಸಿದ್ದೇಶ್ವರ ಮಠದ ವಿದ್ಯಾರ್ಥಿಗಳ ವಸತಿ ಮತ್ತು ಪ್ರಸಾದ ನಿಲಯ ಕಟ್ಟಡಕ್ಕೆ 10 ಕೋಟಿ ರೂ.

ಕೊಪ್ಪಳ ಗವಿಸಿದ್ದೇಶ್ವರ ಮಠದ ವಿದ್ಯಾರ್ಥಿಗಳ ವಸತಿ ಮತ್ತು ಪ್ರಸಾದ ನಿಲಯ ಕಟ್ಟಡಕ್ಕೆ 10 ಕೋಟಿ ರೂ.

ಕೊಪ್ಪಳ : ಕೊಪ್ಪಳದ ಪ್ರಸಿದ್ದ ಗವಿಸಿದ್ದೇಶ್ವರ ಮಠಕ್ಕೆ ಉಚಿತ ವಸತಿ ಮತ್ತು ಪ್ರಸಾದ ನಿಲಯ ಕಟ್ಟಡ ನಿರ್ಮಾಣಕ್ಕೆ 10 ಕೋಟಿ ರೂ. ನೀಡುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಣಕಾಸು ಇಲಾಖೆಗೆ ಸೂಚಿಸಿದ್ದಾರೆ.   ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು  ಸಿಎಂ ಬೊಮ್ಮಾಯಿ ಅವರಿಗೆ ಮಠದ ಸಾಮಾಜಿಕ ಸೇವೆ ಪರಿಗಣಿಸಿ ಅನುದಾನ ನೀಡಲು ಮನವಿ ಸಲ್ಲಿಸಿದ್ದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಅನುದಾನ ಒದಗಿಸಲು ಸೂಚಿಸಿದ್ದಾರೆ.
ಸುಮಾರು 5 ಸಾವಿರ ವಿದ್ಯಾರ್ಥಿಗಳಿಗೆ ಮಠದಲ್ಲಿ ಉಚಿತ ವಸತಿ ಮತ್ತು ಪ್ರಸಾದ ನಿಲಯವನ್ನು ನಿರ್ಮಿಸಲಾಗುತ್ತಿದೆ. ಹಲವಾರು ವರ್ಷಗಳಿಂದ ಶ್ರೀಮಠದಲ್ಲಿ ವಿದ್ಯಾರ್ಥಿಗಳಿಗೆ ದಾಸೋಹ ನೀಡಲಾಗುತ್ತಿದೆ. ಈಗ ಮಕ್ಕಳಿಗೆ ವ್ಯವಸ್ಥಿತವಾದ ಪ್ರಸಾದ ನಿಲಯದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಜನಪ್ರತಿನಿಧಿಗಳು ಮಾಡಿಕೊಂಡ ಮನವಿಗೆ ರಾಜ್ಯ ಸರ್ಕಾರ  ಸಕಾರಾತ್ಮಕವಾಗಿ ಸ್ಪಂದಿಸಿರುವುದು  ಕೊಪ್ಪಳ ಗವಿಮಠದ ಭಕ್ತರಿಂದ ಅಪಾರ ಶ್ಲಾಘನೆ ವ್ಯಕ್ತವಾಗುತ್ತಿದೆ.
9 ಲೈವ್ ನ್ಯೂಸ್ ಕೊಪ್ಪಳ