ಸಿಎಂ ಬೊಮ್ಮಾಯಿ ಉದ್ಘಾಟಿಸಿದ, ಒಂದೇ ದಿನಕ್ಕೆ 'ವೆಸ್ಟ್ ಆಫ್ ಕಾರ್ಡ್ ರಸ್ತೆಯ ಫ್ಲೈಓವರ್' ಬಂದ್

ಬೆಂಗಳೂರು : ಸಿಲಿಕಾನ್ ಸಿಟಿಯ ವೆಸ್ಟ್ ಆಫ್ ಕಾರ್ಡ್ ರಸ್ತೆ ಮೇಲ್ಸೇತುವೆ ಕಾಮಗಾರಿ ಮುಗಿದಿಲ್ಲವೆಂದು ಸಿಎಂ ಬೊಮ್ಮಾಯಿ ಉದ್ಘಾಟಿಸಿದ ಫ್ಲೈಓವರ್ ಒಂದೇ ದಿನಕ್ಕೆ ಬಂದ್ ಮಾಡಲಾಗಿದೆ ಎಂದು ವರದಿಯಾಗಿದೆ.
ಸಿಗ್ನಲ್-ಮುಕ್ತ ರಸ್ತೆ ನಿರ್ಮಿಸುವ ಉದ್ದೇಶದಿಂದ ವೆಸ್ಟ್ ಆಫ್ ಕಾರ್ಡ್ ರೋಡ್ ರಸ್ತೆಗೆ ಫ್ಲೈ ಓವರ್‌ಗಳನ್ನು ನಿರ್ಮಿಸುವ ಯೋಜನೆಯನ್ನು ಬಿಬಿಎಂಪಿ ರೂಪಿಸಿದ್ದು, ಸಿಎಂ ಬೊಮ್ಮಾಯಿ ಉದ್ಘಾಟಿಸಿದ ಫ್ಲೈಓವರ್ ಒಂದೇ ದಿನಕ್ಕೆ ಬಂದ್ ಮಾಡಲಾಗಿದೆ.
ಕಳೆದ ಹಲವು ವರ್ಷಗಳಿಂದ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ವೆಸ್ಟ್ ಆಫ್ ಕಾರ್ಡ್ ರೋಡ್ ಅಂಡರ್ ಪಾಸ್ ಸಣ್ಣ ದುರಸ್ತಿಗಾಗಿ 6 ತಿಂಗಳುಗಳಿಂದ ಬಂದ್ ಮಾಡಲಾಗಿತ್ತು, ಇದೀಗ ಫ್ಲೈಓವರ್ ಉದ್ಘಾಟನೆಯಾದ ಒಂದೇ ದಿನಕ್ಕೆ ಮತ್ತೆ ಬಂದ್ ಮಾಡಿದ್ದಾರೆ. ಕಾಮಗಾರಿ ಪೂರ್ಣಗೊಳ್ಳದೆ ಪ್ರಚಾರಕ್ಕಾಗಿ ಸಿಎಂ ಬೊಮ್ಮಾಯಿ ಉದ್ಘಾಟಿಸಿದ್ದಾರೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ವೆಸ್ಟ್ ಆಫ್ ಕಾರ್ಡ್ ರಸ್ತೆ ತುಮಕೂರು ರಸ್ತೆ ಮತ್ತು ಮೈಸೂರು ರಸ್ತೆ ಸಂಪರ್ಕಿಸುತ್ತದೆ. ಈ ರಸ್ತೆಯು ಬಸವೇಶ್ವರ ನಗರ, ರಾಜಾಜಿನಗರ ಮತ್ತು ಬೆಂಗಳೂರು ಉತ್ತರ ಭಾಗದ ಪ್ರಮುಖ ವಾಣಿಜ್ಯ ಸ್ಥಳಗಳ ಮೂಲಕ ಹಾದುಹೋಗುತ್ತದೆ. ಪದೇ ಪದೇ ಫ್ಲೈಓವರ್ ಬಂದ್ ಮಾಡುವುದರಿಂದ ವಾಹನ ಸವಾರರಿಗೆ ಬಹುದೊಡ್ಡ ಕಿರಿಕಿರಿ ಎದುರಾಗಿದಂತೂ ನಿಜ. ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರು ಬಿಬಿಎಂಪಿ ವಿರುದ್ಧ ಹಿಡಿ ಶಾಪ ಹಾಕುತ್ತ ತೆರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ