ಸಿಎಂ ಬೊಮ್ಮಾಯಿ ಭೇಟಿಯಾದ ಸಚಿವಾಕಾಂಕ್ಷಿಗಳು : ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ?

ಸಿಎಂ ಬೊಮ್ಮಾಯಿ ಭೇಟಿಯಾದ ಸಚಿವಾಕಾಂಕ್ಷಿಗಳು : ಶೀಘ್ರವೇ ರಾಜ್ಯ ಸಚಿವ ಸಂಪುಟ ವಿಸ್ತರಣೆ?

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಂದಿನ ವಾರ ದೆಹಲಿಗೆ ತೆರಳುವ ಸಾಧ್ಯತೆ ಇದ್ದು, ವರಿಷ್ಠರ ಬಳಿ ಸಚಿವ ಸಂಪುಟ ವಿಸ್ತರಣೆ ಸಂಬಂಧ ಚರ್ಚೆ ನಡೆಸುವ ಸಾಧ್ಯತೆ ಇದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ದೆಹಲಿ ಭೇಟಿ ಬಗ್ಗೆ ವರಿಷ್ಠರ ಬಳಿ ಸಮಯ ಕೇಳಿದ್ದೇನೆ. ವರಿಷ್ಠರು ಸಮಯ ಕೊಟ್ಟ ಬಳಿಕ ದೆಹಲಿಗೆ ಹೋಗುತ್ತೇನೆ. ಈ ವಾರಂತ್ಯದಲ್ಲಿ ದೆಹಲಿಗೆ ಹೋಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇನ್ನು ಸಿಎಂ ಬೊಮ್ಮಾಯಿ ದೆಹಲಿಗೆ ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಸಚಿವಾಕಾಂಕ್ಷಿಗಳು ಭೇಟಿಯಾಗಿದ್ದಾರೆ. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ರಮೇಶ್ ಜಾರಕಿಹೊಳಿ, ಸಿ.ಪಿ. ಯೋಗೇಶ್ವರ್ ಅವರು ಭೇಟಿಯಾಗಿದ್ದು, ಸಂಪುಟ ಸೇರ್ಪಡೆ ಬಗ್ಗೆ ವರಿಷ್ಠರ ಜೊತೆಗೆ ಮಾತನಾಡುವಂತೆ ಒತ್ತಾಯಿಸಿದ್ದಾರೆ ಎನ್ನಲಾಗಿದೆ.