ಸಿಎಂ ಬೊಮ್ಮಾಯಿ ವಿರುದ್ಧ ಸ್ಪರ್ಧೆ; ಇದು ಹೈಕಮಾಂಡ್ ವಿಚಾರ ಎಂದ ಮಾಜಿ ಸಚಿವ ವಿನಯ್ ಕುಲಕರ್ಣಿ
ಬೆಳಗಾವಿ: ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧೆ ಮಾಡಬೇಕು ಎಂಬುದು ನನ್ನ ವಿಚಾರವಲ್ಲ, ಸಿಎಂ ಬೊಮ್ಮಾಯಿ ವಿರುದ್ಧ ಸ್ಪರ್ಧೆ ಮಾಡಬೇಕುಂಬುದು ಹೈಕಮಾಂಡ್ ವಿಚಾರ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ತಿಳಿಸಿದ್ದಾರೆ.
ಬೆಳಗಾವಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿನಯ್ ಕುಲಕರ್ಣಿ, ಧಾರವಾಡಕ್ಕೆ ಹೋಗುವುದಕ್ಕೆ ನನಗೆ ಕೋರ್ಟ್ ನಿರ್ಬಂಧ ಇದೆ.
ಶಿಗ್ಗಾಂವಿ ಒಂದೇ ಅಲ್ಲ, ನನಗೆ ಇನ್ನೂ ನಾಲ್ಕೈದು ಕ್ಷೇತ್ರಗಳಿವೆ. ಪಕ್ಷ ಯಾವ ಕ್ಷೇತ್ರದಿಂದ ಸ್ಪರ್ಧೆಗೆ ಸೂಚಿಸುತ್ತೋ ಅಲ್ಲಿಂದ ಸ್ಪರ್ಧೆ ಮಾಡುವುದಾಗಿ ತಿಳಿಸಿದರು.