ಸಿಎಂ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಮುದ್ದಹನುಮೇಗೌಡ, ಶಶಿಕುಮಾರ್, ಅನಿಲ್ಕುಮಾರ್

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಎಸ್.ಪಿ. ಮುದ್ದಹನುಮೇಗೌಡ ಮತ್ತು ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದರೂ ಆದ ನಟ ಶಶಿಕುಮಾರ್ ಇಂದು(ಗುರುವಾರ) ಬಿಜೆಪಿ ಸೇರ್ಪಡೆಯಾದರು.
ನಗರದ ಬಿಜೆಪಿ ಕಚೇರಿಯಲ್ಲಿ ಇಬ್ಬರಿಗೂ ಬಿಜೆಪಿ ಶಾಲು ಹೊದಿಸಿ, ಬಿಜೆಪಿ ಬಾವುಟ ಕೈಗೆ ಕೊಟ್ಟು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಅವರು ಸ್ವಾಗತಿಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಕೈ ಟಿಕೆಟ್ ತಪ್ಪಿದ್ದಕ್ಕೆ ಅಸಮಾಧಾನಗೊಂಡ ಮುದ್ದಹನುಮೇಗೌಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಣಿಗಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಇನ್ನು ನಟ ಶಶಿಕುಮಾರ್ ಅವರು ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಬಯಸಿದ್ದಾರೆ. ಅನಿಲ್ ಕುಮಾರ್ ಅವರು ಕೊರಟಗೆರೆ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದಾರೆ.