ಸಿಎಂ ಬೊಮ್ಮಾಯಿ ಆಡಳಿತ ವೈಖರಿಗೆ ಹೈಕಮಾಂಡ್ ಮೆಚ್ಚುಗೆ; ಅವರೇ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದ ಅರುಣ್ ಸಿಂಗ್

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರ ಕಾರ್ಯವೈಖರಿಗೆ ಹೈಕಮಾಂಡ್ ಶಹಬಾಸ್ ಗಿರಿ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಘೋಷಿಸುವ ಸಾಧ್ಯತೆ ದಟ್ಟವಾಗಿದೆ.
ಈ ಬಗ್ಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೇ ಮಾಹಿತಿ ನೀಡಿದ್ದಾರೆ.
ಬಿಜೆಪಿ ಈ ಬಾರಿ ಕರ್ನಾಟಕದಲ್ಲಿ 150ಕ್ಕಿಂತಲೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಪ್ರಧಾನಿ ಮೋದಿ ಹಾಗೂ ಸಿಎಂ ಬೊಮ್ಮಾಯಿ ಅವರ ಆಡಳಿತ ಜನರಿಗೂ ಇಷ್ಟವಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಮಾರ್ಗದರ್ಶನದಲ್ಲಿ ಹಾಗೂ ಬೊಮ್ಮಾಯಿ ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಬೊಮ್ಮಾಯಿ ಅವರೇ ನಮ್ಮ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ. ಇದರಲ್ಲಿ ಯಾವುದೇ ಅನುಮಾನವಿಲ್ಲ. ಸಾಮಾನ್ಯ ಜನರೊಂದಿಗೆ ಸುಲಭವಾಗಿ ಬೆರೆಯುವ ಬೊಮ್ಮಾಯಿ ಅವರ ಆಡಳಿತ ಎಲ್ಲರಿಗೂ ಮೆಚ್ಚುಗೆಯಾಗಿದೆ ಎಂದು ಹೇಳಿದರು.