ಸಿದ್ದರಾಮಯ್ಯ 10 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೂ ಸೋಲು ಖಚಿತ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಸಿದ್ದರಾಮಯ್ಯ 10 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೂ ಸೋಲು ಖಚಿತ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಎರಡಲ್ಲ 10 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೂ ಸೋಲುವುದು ಖಚಿತ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯರಿಗೆ ಸೋಲುವ ಭೀತಿ ಕಾಡುತ್ತಿದೆ.

ಹೀಗಾಗಿ ಬಾದಾಮಿ ಕ್ಷೇತ್ರವನ್ನು ಬಿಟ್ಟು ಕೋಲಾರಕ್ಕೆ ಬಂದಿದ್ದಾರೆ. ಈ ಮೂಲಕ ಬಾದಾಮಿ ಮತದಾರರಿಗೆ ಸಿದ್ದರಾಮಯ್ಯ ದ್ರೋಹ ಬಗೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಬಾದಾಮಿ ದೂರವಾಗುವ ಕಾರಣಕ್ಕೆ ಕೋಲಾರದಿಂದ ಸ್ಪರ್ಧಿಸುತ್ತಿರುವುದಾಗಿ ಸಿದ್ದರಾಮಯ್ಯ ಹೇಳುತ್ತಾರೆ, ಅವರು ಎರಡು ಕ್ಷೇತ್ರಗಳಲ್ಲ 10 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೂ ಸೋಲುವುದು ಖಚಿತ ಎಂದು ಎಂದರು.