ಸಿದ್ದರಾಮಯ್ಯ ಅವರೇ ಸುಳ್ಳಿನ ಸುಳಿಯಲ್ಲಿ ಸಿಲುಕಿದ್ದಾರೆ: ಸಿಎಂ ಬೊಮ್ಮಾಯಿ

ಹುಬ್ಬಳ್ಳಿ:
ಹುಬ್ಬಳ್ಳಿ: ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಭ್ರಷ್ಟಾಚಾರದ ಆರೋಪ ವಿಚಾರವಾಗಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಅವರೇ ಸುಳ್ಳಿನ ಸುಳಿಯಲ್ಲಿ ಸಿಲುಕಿದ್ದಾರೆ ಎಂದು ಸಿಎಂ ಬೊಮ್ಮಾಯಿ ಕಿಡಿಕಾರಿದ್ದಾರೆ.
ಸಿದ್ದರಾಮಯ್ಯ ಹೇಳಿರುವ ಸುಳ್ಳು ಬಂದೊಂದಾಗಿ ಹೊರ ಬರ್ತಿದೆ. ಅವರು ಪ್ರಣಾಳಿಕೆಯಲ್ಲಿ ಘೋಷಿಸಿದ ಭರವಸೆ ಬಗ್ಗೆ ಹೇಳಿದ್ದೇನೆ . ಭರವಸೆಗಳ ಕುರಿತು ವಿಧಾನಸಭೆ ಅಧಿವೇಶನದಲ್ಲೇ ಹೇಳಿದ್ದೇನೆ. ಸಾವಿರ ಬಾರಿ ಸುಳ್ಳು ಹೇಳಿದ್ರೆ ಅದು ಸತ್ಯವಾಗುತ್ತೆ ಅನ್ನೋ ಭ್ರಮೆಯಲ್ಲಿದ್ದಾರೆ . ಸತ್ಯ ಸತ್ಯವೇ… ಸುಳ್ಳು.. ಸುಳ್ಳೇ ಎಂದು ಸಿಎಂ ಬಸವರಾಜ ಬೊಮ್ಮಾಯಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇನ್ನು ರಾಜಕೀಯದಿಂದ ಯಡಿಯೂರಪ್ಪ ನಿವೃತ್ತಿ ಘೋಷಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿ,ಬಿ.ಎಸ್ ಯಡಿಯೂರಪ್ಪ ಸಕ್ರಿಯ ರಾಜಕಾರಣದಿಂದ ದೂರವಾಗಲ್ಲ. ಈ ಬಗ್ಗೆ ಬಿ.ಎಸ್ ಯಡಿಯೂರಪ್ಪ ಅವರೇ ಸ್ಪಷ್ಟನೆ ನೀಡಿದ್ದಾರೆ. ಯಡಿಯೂರಪ್ಪಬಿಜೆಪಿಯನ್ನು ಮತ್ತಷ್ಟು ಬಲಪಡಿಸುತ್ತಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.