ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ತಡೆ

ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ತಡೆ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಕೇಸ್‌ನಲ್ಲಿ ಇಬ್ಬರು ಆರೋಪಿಗಳ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಾಂತರ ತಡೆಯಾಜ್ಞೆ ನೀಡಿದೆ. ಆರೋಪಿಗಳಾದ ಎನ್‌.ಡಿ.ಸಂಪತ್‌ ಕುಮಾರ್‌ & ಬಿ.ಎಂ.ಸಂತೋಷ್‌‌‌‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಎಸ್‌‌‌‌.ರಾಚಯ್ಯ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ. ಮೇಲ್ನೋಟಕ್ಕೆ ಅರ್ಜಿದಾರರ ವಾದದಲ್ಲಿ ಹುರುಳಿದೆ ಎನಿಸುತ್ತಿದೆ ಎಂದು ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ಪ್ರಕರಣದ ವಿಚಾರಣೆಗೆ ತಡೆ ನೀಡಿದೆ.