ಸಿದ್ದರಾಮಯ್ಯ ಎರಡಲ್ಲ, 25 ಕ್ಷೇತ್ರದಲ್ಲಿ ಸ್ಪರ್ಧಿಸಿದ್ರೂ ಗೆಲ್ಲಲ್ಲ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ : ಮಾಜಿ ಸಿಎಂ ಸಿದ್ದರಾಮಯ್ಯ ಎರಡಲ್ಲ, 25 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ರೂ ಸೋಲ್ತಾರೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎರಡಲ್ಲ, 25 ಕ್ಕೂ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ರೂ ಸೋಲ್ತಾರೆ, ಕೋಲಾರ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಗೆಲ್ಲುವ ಚಾನ್ಸೇ ಇಲ್ಲ, ಕಾಂಗ್ರೆಸ್, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸೇರಿ ಸಿದ್ದರಾಮಯ್ಯ ಸೋಲಿಸುವುದು ನಿಶ್ಚಿತ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಮುನಿಯಪ್ಪ, ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಅವರನ್ನು ಸೋಲಿಸಿದ್ದಾರೆ. ಈಗ ಅದೇ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯರನ್ನು ಸೋಲಿಸ್ತಾರೆ ಎಂದರು.
ಸ್ಯಾಂಟ್ರೋ ರವಿ ಬಂಧನದ ಕುರಿತು ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಪೊಲೀಸರು ರಾಜಕೀಯ ಒತ್ತಡಕ್ಕೆ ಒಳಗಾಗದೇ ತನಿಖೆ ಮಾಡಬೇಕು.ಸ್ಯಾಂಟ್ರೋ ರವಿ ಮಾಡಿರುವ ದಂಧಗೆ ಕ್ಷಮೆ ಇಲ್ಲ, ವಿನಾಕಾರಣ ಗೃಹ ಸಚಿವರ ಮೇಲೆ ಆರೋಪ ಮಾಡುವುದು ಸರಿಯಲ್ಲ. ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಸಾಕಷ್ಟು ಆರೋಪ ಮಾಡಬಹುದು. ಮತ್ತೊಬ್ಬರನ್ನು ಕಳ್ಳ ಅಂತ ಹೇಳಿ ತಾನು ಸಾಚಾ ಅಂತ ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.