ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಲ್ಲ : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಲ್ಲ : ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ

ಶಿವಮೊಗ್ಗ : ಸಿದ್ದರಾಮಯ್ಯ ಅವರು ಮತ್ತೆ ಮುಖ್ಯಮಂತ್ರಿ ಆಗಲ್ಲ. ಇನ್ಮುಂದೆ ಕಾಂಗ್ರೆಸ್ ಪಕ್ಷದ ಯಾರೊಬ್ಬರೂ ಸಿಎಂ ಆಗಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ ಭ್ರಷ್ಟಚಾರ ಬಹಿರಂಗವಾಗಿದೆ.

ಬಾಯಿ ಮುಚ್ಚಿಕೊಂಡು ಇರುವಂತಹ ಪರಿಸ್ಥಿತಿ ಬಂದಿದೆ. ಸಿದ್ದರಾಮಯ್ಯ ಚೆಕ್ ಮೂಲಕ 1.30 ಕೋಟಿ ರೂ. ಲಂಚ ಪಡೆದಿದ್ದಾರೆ. ದಾಖಲೆ ಸಮೇತ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ ಎಂದರು.

ಈಶ್ವರಪ್ಪರನ್ನು ಬಿಜೆಪಿ ಸಿಎಂ ಮಾಡಲಿ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ದೇಶದ ಪ್ರಧಾನ ಮಂತ್ರಿ ಮೋಓದಿ ಹಿಂದುಳಿದ ವರ್ಗಕ್ಕೆ ಸೇರಿದವರು. ಕಾಂಗ್ರೆಸ್ ಹಿಂದುಳಿದ ವರ್ಗದವರನ್ನು ಪ್ರಧಾನಿ ಮಾಡಿಲ್ಲ.ಪ್ರಧಾನಿ ಮೋದಿಯನ್ನು ಇಡೀ ವಿಶ್ವವೇ ಮೆಚ್ಚುತ್ತಿದೆ. ಒಬ್ಬ ರಾಷ್ಟ್ರ ಭಕ್ತನನ್ನು ಬಿಜೆಪಿ ಪ್ರಧಾನ ಮಂತ್ರಿ ಮಾಡಿದೆ ಎಂದು ಹೇಳಿದ್ದಾರೆ.