ಕೋಲಾರ: ವಿಧಾನಸಭೆ ಚುನಾವಣೆ ಹತ್ರ ಬರುತ್ತಿದೆ. ಹೀಗಾಗಿ ರಾಜಕೀಯ ಚಟುವಟಿಕೆಗಳು ರಂಗೇರಿದೆ.
ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿದೆ. ಕೋಲಾರದಲ್ಲಿ ಇಂದು ಕಾಂಗ್ರೆಸ್ ಪ್ರಜಾಧ್ವನಿ ಸಮಾವೇಶ ನಡೆಯಲಿದೆ.ಕೋಲಾರ ಹೊರವಲಯದ ಟಮಕ ಬಳಿ ಮಧ್ಯಾಹ್ನ 12 ಗಂಟೆಗೆ ಸಮಾವೇಶ ಪ್ರಾರಂಭವಾಗಲಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಾಗಿ ಹೇಳಿರುವ ಹಿನ್ನೆಲೆ ಇಂದಿನ ಕೋಲಾರದ ಪ್ರಜಾಧ್ವನಿ ಸಮಾವೇಶ ಮಹತ್ವ ಪಡೆದುಕೊಂಡಿದೆ.ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಡಾ. ಜಿ.ಪರಮೇಶ್ವರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಶಾಸಕ ಕೃಷ್ಣಭೈರೇಗೌಡ ಸೇರಿ ಪ್ರಮುಖ ನಾಯಕರು ಭಾಗಿಯಾಗಲಿದ್ದಾರೆ. ಕಾಂಗ್ರೆಸ್ ಸಮಾವೇಶದಲ್ಲಿ ಸುಮಾರು 50 ಸಾವಿರ ಜನ ಸೇರುವ ನಿರೀಕ್ಷೆ ಇದೆ.