ಕುಷ್ಟಗಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಸಿದ್ದರಾಮಯ್ಯಗೆ ಮಾಜಿ ಶಾಸಕ ಹಸನಸಾಬ್ ದೋಟಿಹಾಳ ಆಹ್ವಾನ

ಕೊಪ್ಪಳ: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕುಷ್ಟಗಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮಾಜಿ ಶಾಸಕ ಹಸನಸಾಬ್ ದೋಟಿಹಾಳ ಆಹ್ವಾನಿಸಿದ್ದಾರೆ. ಕೊಪ್ಪಳ ಜಿಲ್ಲೆಯಕುಷ್ಟಗಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದಲ್ಲಿ ಅವರು ಮಾತನಾಡಿ, ಅಮರೇಗೌಡರನ್ನು ಕ್ಷೇತ್ರದ ಚುನಾವಣಾ ಉಸ್ತುವಾರಿ ಮಾಡುತ್ತೇವೆ. 1991ರಿಂದ ಕುಷ್ಟಗಿ ಕ್ಷೇತ್ರದ ಮೇಲೆ ಸಿದ್ದರಾಮಯ್ಯಗೆ ಅಪಾರ ಪ್ರೀತಿ ಇದೆ. ನಾನು ಹಾಗೂ ಅಮರೇಗೌಡ ಇಬ್ಬರೂ ಸೇರಿ ಆಹ್ವಾನ ಕೊಟ್ಟಿದ್ದೇವೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಒಬ್ಬ ನಾಯಕ ಬರುತ್ತಾನೆ. ಆದಷ್ಟು ಬೇಗ ಸಿದ್ದರಾಮಯ್ಯನವರು ಒಪ್ಪಿಗೆ ಕೊಡಬೇಕೆಂದು ಮನವಿ ಮಾಡಿದರು. ನಿಮ್ಮ ಚುನಾವಣೆ ಜವಾಬ್ದಾರಿ ನಾವು ಹೊರುತ್ತೇವೆ ಎಂದರು.