ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಆಗಬೇಕು : ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆ

ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಆಗಬೇಕು : ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆ

ಬೆಂಗಳೂರು : ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂಬ ನನ್ನ ಹೇಳಿಕೆಗೆ ಈಗಲೂ ನಾನು ಬದ್ದನಾಗಿದ್ದೇನೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಅಗಬೇಕು. ಆದರೆ ಸಿಎಂ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ. ಸಿದ್ದರಾಮಯ್ಯ ಅವರೇ ಮುಂದಿನ ಮುಖ್ಯಮಂತ್ರಿ ಆಗಬೇಕು ಎಂಬ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಚಾಮರಾಜಪೇಟೆಯಲ್ಲಿ ಸ್ಪರ್ಧಿಸಿದರೆ ನಾನು ಕ್ಷೇತ್ರ ಬಿಟ್ಟುಕೊಡುತ್ತೇನೆ. ನಾನು ಈಗಲೂ ಸಿದ್ದರಾಮಯ್ಯರನ್ನು ಆಹ್ವಾನ ಮಾಡ್ತೇನೆ. ಸಿದ್ದರಾಮಯ್ಯ ಚಾಮರಾಜಪೇಟೆಯ ಅಳಿಯ, ನಾನು ಚಾಮರಾಜಪೇಟೆಯ ಮನೆ ಮಗ. ಚಾಮರಾಜಪೇಟೆಯಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಿದರೆ ಗೆದ್ದೇ ಗೆಲ್ತಾರೆ ಎಂದರು.