ಸಿದ್ದರಾಮಯ್ಯನವರೇ ರಾಜ್ಯದ ಜನತೆಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ : ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

ಬೆಂಗಳೂರು : ಸಿದ್ದರಾಮಯ್ಯನವರೇ ರಾಜ್ಯದ ಜನತೆಗೆ ಸುಳ್ಳು ಸುದ್ದಿ ಹಬ್ಬಿಸಬೇಡಿ, ನಾಡಿನ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಜೀಯ ಕೈಯಿಂದಲೇ ಇಂದು ಸಾವಿರಾರು ಕೋಟಿ ರೂ. ವೆಚ್ಚದ ಯೋಜನೆಗಳನ್ನು ಉದ್ಧಾಟನೆ ಮಾಡಿದ್ದೇವೆ ಎಂದು ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಅವರು, ಸುಳ್ಳುಸುದ್ದಿಯ ಸಿದ್ದರಾಮಯ್ಯನವರೇ, ಕೆಂಪೇಗೌಡರನ್ನು ಆದರ್ಶವಾಗಿಟ್ಟುಕೊಂಡು ನಾಡಿನ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಜೀಯ ಕೈಯಿಂದಲೇ ಇಂದು ಸಾವಿರಾರು ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗಳನ್ನು ನಮ್ಮ ರಾಜ್ಯದಲ್ಲಿ ಉದ್ಘಾಟನೆ ಮಾಡಿದ್ದೇವೆ ಎಂದು ಹೇಳಿದ್ದಾರೆ.