ಸಿದ್ದರಾಮಯ್ಯ ಭೇಟಿಯಾದ ಇಬ್ರಾಹಿಂ : ಪ್ರತಿಪಕ್ಷ ನಾಯಕ ಸ್ಥಾನದ ಮೇಲೆ ಕಣ್ಣು ?

ಸಿದ್ದರಾಮಯ್ಯ ಭೇಟಿಯಾದ ಇಬ್ರಾಹಿಂ : ಪ್ರತಿಪಕ್ಷ ನಾಯಕ ಸ್ಥಾನದ ಮೇಲೆ ಕಣ್ಣು ?

ಬೆಂಗಳೂರು : ಕಾಂಗ್ರೆಸ್ ಪಕ್ಷದ ಚಟುವಟಿಕೆ ಯಿಂದ ದೂರ ಇದ್ದ ಸಿ.ಎಂ.ಇಬ್ರಾಹಿಂ ಅವರು ಭಾನುವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಸಿ.ಎಂ.ಇಬ್ರಾಹಿಂ ಅವರು ಎಸ್.ಆರ್. ಪಾಟೀಲ್ ಅವರಿಂದ ತೆರವಾಗಲಿರುವ ಪರಿಷತ್ ಪ್ರತಿಪಕ್ಷದ ನಾಯಕ ಸ್ಥಾನದ ಮೇಲೆ ಕಣ್ಣಿಟ್ಟಿದ್ದು, ಇದೇ ಕಾರಣಕ್ಕೆ ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ ಎನ್ನಲಾಗಿದೆ.

ಶನಿವಾರ ಡಿಕೆ.ಶಿವಕುಮಾರ್ ಅವರನ್ನೂ ಭೇಟಿ ಮಾಡಿದ್ದರು ಎಂದು ಹೇಳಲಾಗಿದೆ. ಇಬ್ರಾಹಿಂ ಭೇಟಿ ಬೆನ್ನಲ್ಲೇ ಮತ್ತಿಬ್ಬರು ಆಕಾಂಕ್ಷಿಗಳಾದ ಅಲ್ಲಂ ವೀರಭದ್ರಪ್ಪ ಮತ್ತು ಸಲೀಂ ಅಹಮದ್ ಸಹ ಸಿದ್ದರಾಮಯ್ಯ ಭೇಟಿ ಮಾಡಿ ಚರ್ಚಿಸಿದ್ದಾರೆ.