ದೊಡ್ಡಗೌಡರ ತವರು ಜಿಲ್ಲೆ ಹಾಸನದಲ್ಲಿ 'ಪ್ರಜಾಧ್ವನಿ' ಯಾತ್ರೆ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನ: ಸಿದ್ದು-ಡಿಕೆಶಿ ಪರ ಘೋಷಣೆ ಕೂಗದಂತೆ ವಾರ್ನಿಂಗ್

ದೊಡ್ಡಗೌಡರ ತವರು ಜಿಲ್ಲೆ ಹಾಸನದಲ್ಲಿ 'ಪ್ರಜಾಧ್ವನಿ' ಯಾತ್ರೆ ಮೂಲಕ ಕಾಂಗ್ರೆಸ್ ಶಕ್ತಿ ಪ್ರದರ್ಶನ: ಸಿದ್ದು-ಡಿಕೆಶಿ ಪರ ಘೋಷಣೆ ಕೂಗದಂತೆ ವಾರ್ನಿಂಗ್
ಪ್ರಜಾಧ್ವನಿ ಯಾತ್ರೆ’ ಮೂಲಕ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತವರು ಜಿಲ್ಲೆ ಹಾಸನ ತಮ್ಮ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ನಾಯಕರು ತುದಿಗಾಲಲ್ಲಿ ನಿಂತಿದ್ದಾರೆ. ಹಾಸನ: ‘ಪ್ರಜಾಧ್ವನಿ ಯಾತ್ರೆ’ ಮೂಲಕ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತವರು ಜಿಲ್ಲೆ ಹಾಸನ ತಮ್ಮ ಶಕ್ತಿ ಪ್ರದರ್ಶನಕ್ಕೆ ಕಾಂಗ್ರೆಸ್ ನಾಯಕರು ತುದಿಗಾಲಲ್ಲಿ ನಿಂತಿದ್ದಾರೆ.
ಅರಕಲಗೂಡು ವಿಧಾನಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಕೃಷ್ಣೇಗೌಡ, ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾದ ಬನವಾಸೆ ರಂಗಸ್ವಾಮಿ, ಬಾಗೂರು ಮಂಜೇಗೌಡ, ಬೇಲೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಬಿ.ಶಿವರಾಮು ಅವರ ಅಪಾರ ಬೆಂಬಲಿಗರು ರ್ಯಾಲಿಗೆ ಆಗಮಿಸುವ ನಿರೀಕ್ಷೆಯಿದೆ. ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಬೆಂಗಳೂರು (ಗ್ರಾಮಾಂತರ) ಸಂಸದ ಡಿ.ಕೆ.ಸುರೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವನಾರಾಯಣ್ ಎರಡು ಬಾರಿ ಹಾಸನಕ್ಕೆ ಭೇಟಿ ನೀಡಿ ಹಿರಿಯ ಮುಖಂಡರು, ಟಿಕೆಟ್ ಆಕಾಂಕ್ಷಿಗಳು ಹಾಗೂ ಕಾರ್ಯಕರ್ತರೊಂದಿಗೆ ಸಭೆ ನಡೆಸಿ ‘ಪ್ರಜಾಧ್ವನಿ ಯಾತ್ರೆ’ ಯಶಸ್ವಿಗೆ ಶ್ರಮಿಸುವಂತೆ ಸೂಚಿಸಿದ್ದಾರೆ. ಕುತೂಹಲದ ಸಂಗತಿಯೆಂದರೆ, ಯಾತ್ರೆಗೆ ಹೆಚ್ಚಿನ ಕಾರ್ಯಕರ್ತರನ್ನು ಕರೆತರುವ ಮೂಲಕ ಹಿರಿಯ ನಾಯಕರ ಮುಂದೆ ತಮ್ಮ ಶಕ್ತಿ ಪ್ರದರ್ಶಿಸಲು ಟಿಕೆಟ್ ಆಕಾಂಕ್ಷಿಗಳ ನಡುವೆ ಪೈಪೋಟಿ ಇದೆ.