"ಭಾರತ್ ಜೋಡೋ ಮೀಟಿಂಗ್ಗೆ ಹೇಳಿಲ್ಲ, ಕರೆದಿಲ್ಲ ಮಾಡಿಲ್ಲ, ನಾನ್ಯಾಕೆ ಬರಲಿ": ಸಿದ್ದು ಬೇಸರ
ಬೆಂಗಳೂರು: ಭಾರತ್ ಜೋಡೋ ಯಾತ್ರೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲಿಗರ ಮಧ್ಯೆ ಮತ್ತೆ ಅಂತರ ಸೃಷ್ಟಿಯಾಗಿದ್ದು, ಸಿದ್ದರಾಮಯ್ಯ ಬಣ ಬೇಸರಗೊಂಡಿದೆ ಎಂದು ತಿಳಿದು ಬಂದಿದೆ.
“ನನಗೆ ಭಾರತ್ ಜೋಡೋ ಮೀಟಿಂಗ್ಗೆ ಹೇಳಿಲ್ಲ, ಕರೆದಿಲ್ಲ ಮಾಡಿಲ್ಲ, ನಾನ್ಯಾಕೆ ಬರಲಿ ” ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದು ಬಂದಿದೆ. ಭಾರತ್ ಜೋಡೋ ಯಾತ್ರೆಯ ಎಲ್ಲ ಉಸ್ತುವಾರಿಯನ್ನು ಡಿ.ಕೆ.ಶಿವಕುಮಾರ್ ವಹಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಪಟ್ಟ ಸಿದ್ಧತಾ ಸಭೆಗಳಿಗೆ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿಲ್ಲ. ರಾಯಚೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರ ಭಾವಚಿತ್ರವೂ ಇರಲಿಲ್ಲ. ಇದರಿಂದ ಸಿದ್ದರಾಮಯ್ಯ ಬಣ ಬೇಸರಗೊಂಡಿದೆ. ಈ ಬಗ್ಗೆ ಅವರ ಬಳಿ ಪ್ರಸ್ತಾಪಿಸಿದಾಗ ನನ್ನನ್ನು ಕರೆದಿಲ್ಲ, ನಾನು ಹೋಗಿಲ್ಲ ಎಂದು ಸಿದ್ದರಾಮಯ್ಯ ಆಪ್ತರ ಬಳಿ ಬೇಸರ ತೋಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.