ಸಿದ್ದೇಶ್ವರ ಶ್ರೀಗಳ ಅಗಲಿಕೆಯಿಂದ 'ಆಧ್ಯಾತ್ಮಿಕ ಕೊಂಡಿಯೊಂದು ಕಳಚಿದಂತಾಗಿದೆ : ಸಚಿವ ಕೆ. ಗೋಪಾಲಯ್ಯ

ಸಿದ್ದೇಶ್ವರ ಶ್ರೀಗಳ ಅಗಲಿಕೆಯಿಂದ 'ಆಧ್ಯಾತ್ಮಿಕ ಕೊಂಡಿಯೊಂದು ಕಳಚಿದಂತಾಗಿದೆ : ಸಚಿವ ಕೆ. ಗೋಪಾಲಯ್ಯ

ಬೆಂಗಳೂರು : : ನಡೆದಾಡುವ ದೇವರೆಂದೇ ಖ್ಯಾತರಾದ ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಮಹಾಸ್ವಾಮಿಗಳು ಅಸ್ತಂಗತರಾಗಿದ್ದಾರೆ. ಪರಮ ಪೂಜ್ಯ ಶ್ರೀ ಸಿದ್ದೇಶ್ವರ ಮಹಾಸ್ವಾಮೀಜಿ ಅವರ ಅಗಲುವಿಕೆಯಿಂದ ಅತೀವ ದುಃಖವಾಗಿದೆ ಎಂದು ಸಚಿವ ಕೆ.

ಗೋಪಾಲಯ್ಯ ಸಂತಾಪ ಸೂಚಿಸಿದ್ದಾರೆ

ನಿಸ್ವಾರ್ಥ ಸೇವೆ, ಮಮಕಾರಗಳಿಲ್ಲದೆ, ಯಾರ ಹಂಗಿಗೂ ಒಳಗಾಗದೆ ಸರ್ವಜನರಿಂದಲೂ ಪ್ರೀತಿ, ವಿಶ್ವಾಸದ ಖನಿಜ ವಾಗಿದ್ದ ವಿಜಯಪುರ ಜ್ಞಾನಯೋಗಾಶ್ರಮದ ಪರಮ ಪೂಜ್ಯ ಸಿದ್ಧೇಶ್ವರ ಸ್ವಾಮೀಜಿ ಅವರು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದರು. ಸಿದ್ದೇಶ್ವರ ಸ್ವಾಮೀಜಿ ಅವರ ಪ್ರವಚನ ಕೇಳಿದವರು ಅದರಲ್ಲೇ ಅನುರಕ್ತರಾಗಿ ಬಿಡುತ್ತಿದ್ದರು . ಅವರ ಪ್ರವಚನ ಕಾರ್ಯಕ್ರಮ ಎಲ್ಲಿ ಏರ್ಪಡಿಸಿದರೂ ಸಹ ಅಲ್ಲಿಗೆ ಲಕ್ಷಾಂತರ ಸಂಖ್ಯೆಯಲ್ಲಿ ಜನ ಸೇರುತ್ತಿದ್ದರು.

ಒಂದು ಗಂಟೆಯ ಅವರ ಪ್ರವಚನದುದ್ದಕ್ಕೂ ಸೇರಿದ ಅಷ್ಟು ತುಂಬು ತನ್ಮಯತೆಯಿಂದ ಕುಳಿತು ಪ್ರವಚನ ಆಲಿಸುತ್ತಿದ್ದರು. ಸೂಜಿಗಲ್ಲಿನಂತಹ ಸೆಳೆತ, ಅವರ ಭಾಷೆ,ಧಾಟಿ, ಪದಪ್ರಯೋಗ,ಉದಾಹಣೆಗಳ ಮೂಲಕ ಪ್ರಚಲಿತ ಸಂಗತಿಗಳನ್ನು ಸಮ್ಮಿಳಿತಗೊಳಿಸುತ್ತಿದ್ದ ಅವರ ಶೈಲಿ ಜೊತೆಗೆ ಕಲ್ಲು,ಮಣ್ಣು,ಗಿಡ,ಮರ,ಹೂ,ಹಕ್ಕು,ಪಕ್ಷಿ,ಪ್ರಾಣಿಗಳಲ್ಲಿ ಜೀವಚೈತನ್ಯವಿದೆ ಎಂಬುದನ್ನು ಅವರು ವಿವರಿಸುವ ರೀತಿ ಅದ್ಬುತವಾದುದು.

ತಮ್ಮ ಗುರುಗಳು ಸ್ಥಾಪಿಸಿದ ನೂರಾರು ವಿದ್ಯಾ ಸಂಸ್ಥೆಗಳನ್ನು ಸಿದ್ದೇಶ್ವರರು ಮುಂದುವರಿಸಿಕೊಂಡು ಬರುತ್ತಿದ್ದರೂ ಅವರ ಯಾವ ಸಂಸ್ಥೆಗಳಿಗೂ ಆಶ್ರಮದ ಹೆಸರಾಗಲಿ, ಅವರ ಹೆಸರಾಗಲಿ ಇರುವುದಿಲ್ಲ ಎಂದರೆ ಆಶ್ಚರ್ಯವಲ್ಲವೆ? ಕೆರೆಯ ನೀರನ್ನು ಕೆರೆಗೆ ಚೆಲ್ಲಿ. ಎಂಬ ದಾಸ ವಾಣಿಯಂತೆ ನನ್ನದೇನಿದೆ,ಎಲ್ಲವೂ ಭಗವಂತನದು,ಇಲ್ಲಿರುವ ಪ್ರತಿಯೊಬ್ಬ ಮನುಷ್ಯನೂ ದೇವರು.ಎಲ್ಲರಲ್ಲೂ ದೇವರನ್ನು ಕಾಣಬೇಕು. ನಾನು ನನ್ನದೆಂಬ ಮಮಕಾರ ಸಲ್ಲದು. ಇಹಪರ ಎರಡೂ ಒಂದೆ ಎಂದು ಸಾರುತ್ತ ಅದರಂತೆ ನಡೆಯುತ್ತ ಇರುವ ಅಪರೂಪದ ಯೋಗಿಗಳು ಶ್ರೀ ಸಿದ್ದೇಶ್ವರ ಸ್ವಾಮೀಜಿ.

ನಿಸರ್ಗವನ್ನು ಅತ್ಯಂತ ಹೆಚ್ಚಾಗಿ ಪ್ರೀತಿಸುತ್ತಿದ್ದ ಗುರುಗಳು ಇಂದು ನಮ್ಮನ್ನು ಅಗಲಿರುವುದು ಅಪಾರ ದುಃಖ ತಂದಿದೆ.
ಅವರ ಅವರ ಅಗಲುವಿಕೆಯಿಂದ ನಾಡಿನ ಆಧ್ಯಾತ್ಮಿಕ ಕೊಂಡಿಯೊಂದು ಕಳಚಿದಂತಾಗಿದೆ.

ಸಿದ್ದೇಶ್ವರ ಸ್ವಾಮಿಜಿಗಳ ಅಗಲುವಿಕೆಯಿಂದ ಅವರ ಅಪಾರ ಭಕ್ತ ಸಮೂಹಕ್ಕೆ ಆಗಿರುವ ದುಃಖದಲ್ಲಿ ನಾನು ಭಾಗಿ.
ವಯಕ್ತಿಕವಾಗಿ ಪೂಜ್ಯರೊಂದಿಗೆ 50 ವರ್ಷಗಳ ಸುಧಿರ್ಘ ಒಡನಾಟ ಅಂತ್ಯ ಗೊಂಡಿದ್ದು ದುಃಖತಂದಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುವೆ ಎಂದು ಸಚಿವ ಕೆ. ಗೋಪಾಲಯ್ಯ ಸಂತಾಪ ಸೂಚಿಸಿದ್ದಾರೆ