ಸಿದ್ದೇಶ್ವರ ಶ್ರೀಗಳು ಅಸ್ತಂಗತ:ನಿಡಗುಂದಿ ಪಟ್ಟಣ ಬಂದ್;‌ ಸ್ವಾಮೀಜಿ ಭಾವಪೂರ್ಣ ಶ್ರದ್ಧಾಂಜಲಿ

ಸಿದ್ದೇಶ್ವರ ಶ್ರೀಗಳು ಅಸ್ತಂಗತ:ನಿಡಗುಂದಿ ಪಟ್ಟಣ ಬಂದ್;‌ ಸ್ವಾಮೀಜಿ ಭಾವಪೂರ್ಣ ಶ್ರದ್ಧಾಂಜಲಿ

ವಿಜಯಪುರ: ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ.ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಶ್ರೀಗಳ ಅಂತಿಮ ದರ್ಶನಕ್ಕೆ ಲಕ್ಷಾಂತರ ಜನರು ಹರಿದುಬರುತ್ತಿದೆ.

ಈ ನಡುವೆ ವಿವಿದೆಡೆ ಬಂದ್‌ ಮಾಡಿ ಶೋಕಾಚರಣೆ ಮಾಡಿದ್ದಾರೆ. ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಹಾಗೂ ಬಸವನಬಾಗೇವಾಡಿ ತಾಲೂಕಿನ ನಿಡಗುಂದಿ ಪಟ್ಟಣದ ಮಾರಕಟ್ಟೆಯನ್ನು ಬಂದ್‌ ಮಾಡಿ ಶೋಕಾಚರಣೆ ಮಾಡಿದ್ದಾರೆ. ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಅಂತಿಮ ದರ್ಶನ ಸಲ್ಲಿಸಲಾಯಿತು.

ಈಗಾಗಲೇ ಲಕ್ಷಾಂತರ ಜನರು ಬಂದು ಶ್ರೀಗಳ ದರ್ಶನ ಪಡೆಯುತ್ತಿದ್ದಾರೆ. ಶ್ರೀಗಳ ಅಂತಿಮ ದರ್ಶನಕ್ಕೆ ವ್ಯಕ್ತಿಯೊಬ್ಬರು ತಮ್ಮ ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ಬಂದಿದ್ದಾರೆ. ಈ ಮೂಲಕ ವೃದ್ಧೆಗೆ ಶ್ರೀಗಳ ಅಂತಿಮ ದರ್ಶನ ಪಡೆಯಲು ಅನುವು ಮಾಡಿಕೊಟ್ಟಿದ್ದಾರೆ.
ವಿಜಯಪುರದ ನಾಗಠಾಣ ಗ್ರಾಮದ ಓಂಶಾಂತಿ ಶ್ರೀಗಳ ಅಂತಿಮ ದರ್ಶನ ಪಡೆಯಲು ಪರದಾಟ ನಡೆಸುತ್ತಿದ್ದರು.

ಬಬಲೇಶ್ವರ ಗ್ರಾಮದ ಶಿವಾನಂದ ಅವರು ಅಜ್ಜಿಯ ಪರದಾಟ ನೋಡಿ ಭುಜದ ಮೇಲೆ ಹೊತ್ತು ತಂದಿದ್ದಾರೆ.ಶ್ರೀಗಳ ಅಂತಿಮ ದರ್ಶನಕ್ಕೆ ಸಾವಿರಾರು ಭಕ್ತರ ಆಗಮಿಸಿದ್ದಾರೆ. ಪ್ರತಿ ಮೂಲೆ ಮೂಲೆ, ಹಳ್ಳಿಗಳಿಂದಲೂ ಜನರು ಆಗಮಿಸುತ್ತಿದ್ದಾರೆ. ಇನ್ನು ಅಪಾರ ಸಂಖ್ಯೆ ಜನರು ಬರುವ ಸಾಧ್ಯತೆ ಇದೆ. ಇನ್ನು ಇಂದು ಸಂಜೆ 5 ಗಂಟೆಗೆ ಸಿದ್ದೇಶ್ವರ ಸ್ವಾಮೀಜಿ ಅಂತ್ಯಕ್ರಿಯೆ ನಡೆಯಲಿದೆ.