ಸಿದ್ರಾಮುಲ್ಲಾ ಖಾನ್ ಅಧಿಕಾರಕ್ಕೆ ಬಂದ್ರೆ ಹಿಂದೂ ಕಾರ್ಯಕರ್ತರ ಹತ್ಯೆ : ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ
ಚಿಕ್ಕಮಗಳೂರು : ಸಿದ್ರಾಮುಲ್ಲಾಖಾನ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತವೆ. ಸಿದ್ದರಾಮಯ್ಯಗೆ ಸಿದ್ರಾಮುಲ್ಲಾ ಖಾನ್ ಎಂದು ಜನರೇ ಹೆಸರಿಟ್ಟಿದ್ದಾರೆ ಎಂದು ಶಾಸಕ ಸಿ.ಟಿ. ರವಿ ಹೇಳಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆಯುತ್ತಿರುವ ಜನಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಸಿ.ಟಿ.ರವಿ, ಸಿದ್ರಾಮುಲ್ಲಾ ಖಾನ್ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಗಳಾಗುತ್ತವೆ. ಸಿದ್ರಾಮುಲ್ಲಾ ಖಾನ್ ಎಂದು ನಾನು ಹೆಸರಿಟ್ಟಿಲ್ಲ. ಜನರೇ ಹೆಸರಿಟ್ಟಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಇನ್ನು ದತ್ತ ಪೀಠ ವಿಚಾರದಲ್ಲಿ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇವೆ. 2-3 ದಿನಗಳಲ್ಲಿ ದತ್ತಪೀಠಕ್ಕೆ ಅರ್ಚರ ನೇಮಕವಾಗಲಿದೆ. ಈ ಬಾರಿಯೂ ಅದ್ಧೂರಿಯಾಗಿ ದತ್ತ ಜಯಂತಿ ಆಚರಣೆ ಮಾಡುತ್ತೇವೆ. ದತ್ತ ಪೀಠಕ್ಕೆ ಬಿಜೆಪಿ ಸರ್ಕಾರ ನ್ಯಾಯ ದೊರಕಿಸಿಕೊಟ್ಟಿದೆ ಎಂದರು.