ಸಿಬಿಐನಿಂದ ಬಂಧಿತರಾದ ಸೋಮು ನ್ಯಾಮಗೌಡ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಆಪ್ತ ಕಾರ್ಯದರ್ಶಿಯಾಗಿದ್ದ ಕೆಎಎಸ್ ಅಧಿಕಾರಿ ಸೋಮು ನ್ಯಾಮಗೌಡ ಅವರು ಯೋಗೀಶಗೌಡ ಹತ್ಯೆ ಪ್ರಕರಣದಡಿ ಸಿಬಿಐನಿಂದ ಅಧಿಕೃತವಾಗಿ ಬಂಧನಕ್ಕೊಳಗಾಗಿದ್ದಾರೆ.
ಬೆಳಿಗ್ಗೆ ನ್ಯಾಮಗೌಡ ಅವರನ್ನು ವಶಕ್ಕೆ ಪಡೆದಿದ್ದ ಸಿಬಿಐ ಅಧಿಕಾರಿಗಳು ಹಲವು ಗಂಟೆಗಳ ಕಾಲ ಧಾರವಾಡದ ಉಪನಗರ ಠಾಣೆಯಲ್ಲಿ ವಿಚಾರಣೆಗೊಳಪಡಿಸಿದರು.