ಸಿಬ್ಬಂದಿ ನೇಮಕಾತಿ ಆಯೋಗದ ಹುದ್ದೆಗಳ ನೇಮಕಾತಿ : ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗದ ಹುದ್ದೆಗಳ ನೇಮಕಾತಿ : ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನ

ಚಿತ್ರದುರ್ಗ : ಸಿಬ್ಬಂದಿ ನೇಮಕಾತಿ ಆಯೋಗದಿಂದ ಕಿರಿಯ ಗುಮಾಸ್ತ, ಕಿರಿಯ ಸಹಾಯಕ ಕಾರ್ಯದರ್ಶಿ, ದತ್ತಾಂಶ ನಮೂದಕ ಕಾರ್ಯನಿರ್ವಾಹಕ, ದತ್ತಾಂಶ ನಮೂದಕ ಕಾರ್ಯನಿರ್ವಾಹಕ 'ಎ' ದರ್ಜೆಯ ಕಂಪ್ಯೂಟರ್ ಆಧಾರಿತ ಎರಡು ಹಂತಗಳ ಮುಕ್ತ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

2023ರ ಜನವರಿ 4 ಅರ್ಜಿ ಸಲ್ಲಿಸಲು ಕೊನೆಯ ದಿನ.12ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ವಯೋಮಿತಿ 18-27 ವರ್ಷದೊಳಗಿರಬೇಕು. 2023ರ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಪರೀಕ್ಷೆ ನಡೆಯಲಿದೆ. ನಿರ್ಧಿಷ್ಟ ಹುದ್ದೆಗಳಿಗಾಗಿ ಬೆರಳಚ್ಚು ಪರೀಕ್ಷೆ/ಕಂಪ್ಯೂಟರ್ ಕೌಶಲ್ಯ ಪರೀಕ್ಷೆ ನಡೆಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವೆಬ್‍ಸೈಟ್ವೆಬ್‍ಸೈಟ್‍ಗೆ ಭೇಟಿ ನೀಡಬಹುದು ಹಾಗೂ ದೂರವಾಣಿ ಸಂಖ್ಯೆ 080-25502520 ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.