ಸಿಸಿಐ ದಂಡ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಗೂಗಲ್

ಸಿಸಿಐ ದಂಡ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಗೂಗಲ್

ಸ್ಪರ್ಧಾ ವಿರೋಧಿ ಅಭ್ಯಾಸಗಳಿಗಾಗಿ ಭಾರಿ ಮೊತ್ತದ ದಂಡ ವಿಧಿಸಿದ್ದ ಭಾರತೀಯ ಸ್ಪರ್ಧಾ ಆಯೋಗದ ತೀರ್ಪನ್ನು ಪ್ರಶ್ನಿಸಿ ಗೂಗಲ್ ಸುಪ್ರೀಂ ಮೆಟ್ಟಿಲೇರಿದೆ. ಇದಕ್ಕೂ ಮುನ್ನ ಗೂಗಲ್, ರಾಷ್ಟ್ರೀಯ ಕಂಪನಿ ಕಾನೂನು ಮೇಲ್ಮನವಿ ನ್ಯಾಯಮಂಡಳಿಗೆ (NCLAT) ಅರ್ಜಿ ಸಲ್ಲಿಸಿತ್ತು. ಆದರೆ, NCLAT ದಂಡದ ಶೇ.10ರಷ್ಟು ಮೊತ್ತ ಪಾವತಿಸುವಂತೆ ನಿರ್ದೇಶನ ನೀಡಿತ್ತು. ಗೂಗಲ್‌ಗೆ ಸ್ಪರ್ಧಾ ಆಯೋಗವು 2022ರಲ್ಲಿ 1,337 ಕೋಟಿ ರೂ. ದಂಡ ವಿಧಿಸಿತ್ತು. ದಂಡ ವಿಧಿಸಿದ ಕ್ರಮಕ್ಕೆ ಗೂಗಲ್​ ಆಕ್ಷೇಪ ವ್ಯಕ್ತಪಡಿಸಿತ್ತು.