ಸುಪ್ರೀಂ ತೀರ್ಪುಗಳು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯʼ, ಸಿಜೆಐ ನಿರ್ಧಾರಕ್ಕೆ ಪ್ರಧಾನಿ ಮೋದಿ ಶ್ಲಾಘನೆ
ನವದೆಹಲಿ: ಭಾರತದ ಭಾಷಾ ವೈವಿಧ್ಯತೆಯನ್ನು ಎತ್ತಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಪ್ರಾದೇಶಿಕ ಭಾಷೆಗಳಲ್ಲಿ ಲಭ್ಯವಾಗುವಂತೆ ನೀಡಿದ ಹೇಳಿಕೆಗಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನು ಶ್ಲಾಘಿಸಿದ್ದಾರೆ.
ಪ್ರತಿ ಭಾರತೀಯ ಭಾಷೆಯಲ್ಲಿ ಸುಪ್ರೀಂ ಕೋರ್ಟ್ನ ತೀರ್ಪುಗಳನ್ನು ಭಾಷಾಂತರಿಸಲು ಮತ್ತು ಉದ್ದೇಶಕ್ಕಾಗಿ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಪ್ರತಿಪಾದಿಸಿದ ಸಮಾರಂಭದಲ್ಲಿ ಸಿಜೆಐ ಮಾತನಾಡುವ ವೀಡಿಯೊವನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮೋದಿ, 'ಇತ್ತೀಚಿನ ಸಮಾರಂಭದಲ್ಲಿ ಸಿಜೆಐ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಪ್ರಾದೇಶಿಕ ಭಾಷೆಗಳಲ್ಲಿ ಎಸ್ಸಿ ತೀರ್ಪುಗಳು ಲಭ್ಯವಾಗುವಂತೆ ಕೆಲಸ ಮಾಡುವ ಅಗತ್ಯತೆಯ ಬಗ್ಗೆ ಮಾತನಾಡಿದರು. ಅವರು ತಂತ್ರಜ್ಞಾನವನ್ನು ಬಳಸಿಕೊಳ್ಳುವಂತೆ ಸಲಹೆ ನೀಡಿದರು. ಇದು ಶ್ಲಾಘನೀಯ ಚಿಂತನೆಯಾಗಿದೆ. ಇದು ಅನೇಕ ಜನರಿಗೆ, ವಿಶೇಷವಾಗಿ ಯುವಕರಿಗೆ ಸಹಾಯ ಮಾಡುತ್ತದೆ' ಎಂದಿದ್ದಾರೆ.
ವೈದ್ಯಕೀಯ ಮತ್ತು ಎಂಜಿನಿಯರಿಂಗ್ನಂತಹ ತಾಂತ್ರಿಕ ಶಿಕ್ಷಣವನ್ನು ಪ್ರಾದೇಶಿಕ ಭಾಷೆಗಳಲ್ಲಿಯೂ ಲಭ್ಯವಾಗುವಂತೆ ಮಾಡಲು ಸರ್ಕಾರವು ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪ್ರಧಾನಿ ಹೇಳಿದರು.
ಮಹಾರಾಷ್ಟ್ರ ಮತ್ತು ಗೋವಾದ ಬಾರ್ ಕೌನ್ಸಿಲ್ನ ಫೆಸಿಲಿಟೇಶನ್ ಸಮಾರಂಭದಲ್ಲಿ ಮಾತನಾಡಿದ ಸಿಜೆಐ ಚಂದ್ರಚೂಡ್, 'ನಮ್ಮ ಉದ್ದೇಶದ ಮುಂದಿನ ಹಂತವೆಂದರೆ ಪ್ರತಿ ಭಾರತೀಯ ಭಾಷೆಯಲ್ಲಿ ಸುಪ್ರೀಂ ಕೋರ್ಟ್ನ ತೀರ್ಪುಗಳ ಅನುವಾದ ಪ್ರತಿಗಳನ್ನು ಒದಗಿಸುವುದು. ಯಾರು ಇಂಗ್ಲಿಷ್ನಲ್ಲಿ ಅಧಿಕಾರ ಮತ್ತು ಭಾಷಾ ದೃಢತೆಯನ್ನು ಅರ್ಥಮಾಡಿಕೊಳ್ಳುವುದಿಲ್ಲವೋ ಅಂತಹವರಿಗೆ ಹೆಚ್ಚು ಅನುಕೂಲ. . ಆದ್ದರಿಂದ ನಾವು ನಮ್ಮ ನಾಗರಿಕರನ್ನು ಅವರು ಅರ್ಥಮಾಡಿಕೊಳ್ಳುವ ಭಾಷೆಯಲ್ಲಿ, ಅವರು ಗ್ರಹಿಸಬಹುದಾದ ರೀತಿಯಲ್ಲಿ ತಲುಪಲು ಸಹಾಯಕ' ಎಂದಿದ್ದಾರೆ.