ಸುವರ್ಣಸೌಧದ ಎದುರು ಪ್ರತಿಭಟಿಸಲು ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರ ಬಸ್​ ಅಪಘಾತ; 7 ಮಂದಿ ಸ್ಥಿತಿ ಗಂಭೀರ

ಸುವರ್ಣಸೌಧದ ಎದುರು ಪ್ರತಿಭಟಿಸಲು ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರ ಬಸ್​ ಅಪಘಾತ; 7 ಮಂದಿ ಸ್ಥಿತಿ ಗಂಭೀರ

ಧಾರವಾಡ: ಬೆಳಗಾವಿ ಸುವರ್ಣಸೌಧದ ಚಳಿಗಾಲದ ಅಧಿವೇಶನ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಸುವರ್ಣಸೌಧದ ಎದುರು ಸರಣಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಇದೀಗ ಸುವರ್ಣಸೌಧದ ಎದುರು ಪ್ರತಿಭಟನೆ ನಡೆಸಲು ಹೊರಟಿದ್ದ ಅಂಗನವಾಡಿ ಕಾರ್ಯಕರ್ತೆಯರಿದ್ದ ಬಸ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಳ್ಳಾರಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಬಸ್ ಮೂಲಕ ಬೆಳಗಾವಿ ಸುವರ್ಣಸೌಧದ ಮುಂದೆ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಈ ವೇಳೆ ಜಿಲ್ಲೆಯ ತೇಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್​​​ಗೆ ಲಾರಿ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ 7 ಮಂದಿ ಅಂಗನವಾಡಿ ಕಾರ್ಯಕರ್ತೆಯರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ