ಸೆಮಿಫೈನಲ್‌ನಲ್ಲಿ ಮುಗ್ಗರಿಸಿದ ಕರ್ನಾಟಕ; ಎಲ್ಲಾ 9 ಸಿಸಿಎಲ್‌ನಲ್ಲಿ ಬುಲ್ಡೋಜರ್ಸ್ ಪಡೆದ ಸ್ಥಾನಗಳಿವು!

ಸದ್ಯ ಒಂಬತ್ತನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಟೂರ್ನಮೆಂಟ್ ಜರುಗುತ್ತಿದ್ದು, ಇಂದು ( ಮಾರ್ಚ್ 25 ) ವಿಶಾಖಪಟ್ಟಣದ ಕ್ರೀಡಾಂಗಣದಲ್ಲಿ ನಡೆಯಲಿರುವ ಫೈನಲ್ ಪಂದ್ಯದ ಮೂಲಕ ಟೂರ್ನಿ ಅಂತ್ಯಗೊಳ್ಳಲಿದೆ.
ಫೈನಲ್ ಪಂದ್ಯದಲ್ಲಿ ಭೋಜ್‌ಪುರಿ ದಬಾಂಗ್ಸ್ ಹಾಗೂ ತೆಲುಗು ವಾರಿಯರ್ಸ್ ತಂಡಗಳು ಮುಖಾಮುಖಿಯಾಗಲಿದ್ದು, ಹತ್ತನೆಯ ಆವೃತ್ತಿಯ ಚಾಂಪಿಯನ್ ಪಟ್ಟ ಯಾರ ಪಾಲಾಗಲಿದೆ ಎಂಬ ಕುತೂಹಲ ಮೂಡಿದೆ.
ಇನ್ನು ನಮ್ಮ ಕರ್ನಾಟಕ ಬುಲ್ಡೋಜರ್ಸ್ ತಂಡ ಸೆಮಿಫೈನಲ್ ಹಂತದವರೆಗೂ ಬಂದು ನಿನ್ನೆ ( ಮಾರ್ಚ್ 24 ) ನಡೆದ ಸೆಮಿಫೈನಲ್ ಪಂದ್ಯದಲ್ಲಿ ತೆಲುಗು ವಾರಿಯರ್ಸ್ ವಿರುದ್ಧ ಸೋಲುವುದರ ಮೂಲಕ ಟೂರ್ನಿಯಲ್ಲಿನ ತನ್ನ ಗೆಲುವಿನ ನಾಗಾಲೋಟ ನಿಲ್ಲಿಸಿ ಹೊರಬಿದ್ದಿದೆ. ಹೌದು, ಈ ಬಾರಿಯ ಟೂರ್ನಿಯಲ್ಲಿ ಲೀಗ್ ಹಂತದಲ್ಲಿ ತಾನಾಡಿದ್ದ ಎಲ್ಲಾ ಪಂದ್ಯಗಳಲ್ಲಿಯೂ ಗೆದ್ದಿದ್ದ ಕರ್ನಾಟಕ ಬುಲ್ಡೋಜರ್ಸ್ ಸೆಮಿಫೈನಲ್ ಪಂದ್ಯದಲ್ಲಿ ಸೋತಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಬುಲ್ಡೋಜರ್ಸ್ ಮೊದಲ ಇನ್ನಿಂಗ್ಸ್‌ನಲ್ಲಿ 10 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 99 ರನ್ ಕಲೆಹಾಕಿತು. ತೆಲುಗು ವಾರಿಯರ್ಸ್ ಮೊದಲ ಇನ್ನಿಂಗ್ಸ್‌ನಲ್ಲಿ 10 ಓವರ್‌ಗೆ 6 ವಿಕೆಟ್ ನಷ್ಟಕ್ಕೆ 95 ರನ್ ಕಲೆಹಾಕಿತು. ಈ ಮೂಲಕ ಕರ್ನಾಟಕ ಬುಲ್ಡೋಜರ್ಸ್ ತಂಡ ಮೊದಲ ಇನ್ನಿಂಗ್ಸ್ ಮುಕ್ತಾಯಕ್ಕೆ 4 ರನ್‌ಗಳ ಮುನ್ನಡೆಯನ್ನು ಕಾಯ್ದುಕೊಂಡಿತು. ಬಳಿಕ ಎರಡನೇ ಇನ್ನಿಂಗ್ಸ್‌ನಲ್ಲಿ 10 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 98 ರನ್ ಕಲೆಹಾಕಿದ ಕರ್ನಾಟಕ ಬುಲ್ಡೋಜರ್ಸ್ ತೆಲುಗು ವಾರಿಯರ್ಸ್ ತಂಡಕ್ಕೆ ಗೆಲ್ಲಲು 103 ರನ್ ಗುರಿಯನ್ನು ನೀಡಿತು.
ಈ ಗುರಿಯನ್ನು ಬೆನ್ನತ್ತಿದ ತೆಲುಗು ವಾರಿಯರ್ಸ್ 9.4 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 105 ರನ್ ಗಳಿಸಿ 6 ವಿಕೆಟ್‌ಗಳ ಭರ್ಜರಿ ಜಯ ಕಂಡು ಫೈನಲ್ ಪಂದ್ಯಕ್ಕೆ ಲಗ್ಗೆ ಇಟ್ಟಿತು. ಸೋತ ಕರ್ನಾಟಕ ಬುಲ್ಡೋಜರ್ಸ್ ಸೆಮಿಫೈನಲ್ ಹಂತಕ್ಕೆ ತೃಪ್ತಿ ಪಟ್ಟುಕೊಂಡು ಟೂರ್ನಿಗೆ ವಿದಾಯ ಹೇಳಿದೆ. ಹಾಗಿದ್ದರೆ ಇಲ್ಲಿಯವರೆಗೂ ನಡೆದಿರುವ ಒಟ್ಟು 9 ಸೆಲೆಬ್ರಿಟಿ ಕ್ರಿಕೆಟ್ ಲೀಗ್ ಟೂರ್ನಿಗಳಲ್ಲಿ ಕರ್ನಾಟಕ ಬುಲ್ಡೋಜರ್ಸ್ ಯಾವ ಟೂನಿಯಲ್ಲಿ ಎಷ್ಟನೇ ಸ್ಥಾನ ಪಡೆದುಕೊಂಡಿತ್ತು ಎಂಬ ಮಾಹಿತಿ ಈ ಕೆಳಕಂಡಂತಿದೆ..
2011 - ರನ್ನರ್ ಅಪ್
2012 - ರನ್ನರ್ ಅಪ್
2013 - ಚಾಂಪಿಯನ್ಸ್
2014 - ಚಾಂಪಿಯನ್ಸ್
2015 - ಸೆಮಿಫೈನಲ್ಸ್
2016 - ರನ್ನರ್ ಅಪ್
2017 - ಗ್ರೂಪ್ ಹಂತ
2019 - ರನ್ನರ್ ಅಪ್
2023 - ಸೆಮಿಫೈನಲ್ಸ್