ಸೇತುವೆಗೆ ಢಿಕ್ಕಿ ಹೊಡೆದ ಕಾರು: ಯುವ ಕಾಂಗ್ರೆಸ್ ಮುಖಂಡ ಸೇರಿ ಇಬ್ಬರು ಸ್ಥಳದಲ್ಲೇ ಸಾವು

ಧಾರವಾಡ: ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ, ವಾಹನ ಪಲ್ಟಿಯಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೇರಿ ಇಬ್ಬರು ಸ್ಥಳದಲ್ಲಿ ಸಾವಿಗೀಡಾದ ಘಟನೆ ಅಮ್ಮಿನಬಾವಿ ಸಮೀಪ ನಡೆದಿದೆ.
ಘಟನೆಯಲ್ಲಿ ಯರಗಟ್ಟಿ-ಮುನವಳ್ಳಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಕುಮಾರ ಯಶವಂತ ಸೋಮಶೇಖರ ಯಲಿಗಾರ ಹಾಗೂ ಜೊತೆಗಿದ್ದ ಮತ್ತೋರ್ವ ಸಾವಿಗೀಡಾಗಿದ್ದಾರೆ.
ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಶವಗಳನ್ನ ಮರಣೋತ್ತರ ಪರೀಕ್ಷೆಗಾಗಿ ಧಾರವಾಡದ ಸಿವಿಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಗ್ರಾಮೀಣ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.