ಸೇನಾ ಹೆಲಿಕಾಪ್ಟರ್ ಪತನ : ಸಾವಿನ ಸಂಖ್ಯೆ 13ಕ್ಕೆ ಏರಿಕೆ | Gen Bipin Rawat Chopper Crash
ಚೆನ್ನೈ : ತಮಿಳುನಾಡಿನ (Tamil Nadu) ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ (Army Helicopter) ಪತನವಾಗಿದ್ದು, ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಬದುಕುಳಿದ ಒಬ್ಬರಿಗೆ ತೀವ್ರ ಸುಟ್ಟ ಗಾಯಗಳಿಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗ್ತಿದೆ.
ತಮಿಳುನಾಡಿನ ನೀಲಗಿರಿ ಜಿಲ್ಲೆಯ ಕೂನೂರಿನಲ್ಲಿ (Coonoor, Tamil Nadu) ಸೇನಾ ಹೆಲಿಕಾಪ್ಟರ್ (Army helicopter) ಪತನಗೊಂಡಿದೆ. ಈ ಸೇನಾ ಹೆಲಿಕಾಪ್ಟರ್ ಸೇನೆಯ ಐವರು ಹಿರಿಯ ಅಧಿಕಾರಿಗಳ ಸಹಿತ ಸೇನಾ ರಕ್ಷಣಾ ಪಡೆ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವ್ರ ಪತ್ನಿ ಸೇರಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ರು. ಇನ್ನಿವ್ರು ಸೇನಾ ಕಾಲೇಜಿನಲ್ಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುತ್ತಿದ್ದರು.
ಅಂದ್ಹಾಗೆ, ಇಲ್ಲಿಯವರೆಗೆ ಲಭ್ಯವಿರುವ ಮಾಹಿತಿಯ ಪ್ರಕಾರ, ಅಪಘಾತ ಹೆಲಿಕಾಪ್ಟರ್ ಸಿಡಿಎಸ್ ಜನರಲ್ ಬಿಪಿನ್ ರಾವತ್, ಸಿಡಿಎಸ್, ಮಧುಲಿಕಾ ರಾವತ್, ಬ್ರಿಗೇಡಿಯರ್ ಎಲ್ ಎಸ್ ನಾಯಕ, ಲೆಫ್ಟಿನೆಂಟ್ ಹರ್ಜಿಂದರ್ ಸಿಂಗ್, ಎನ್ ಕೆ ಗುರ್ ಸೇವಕ್ ಸಿಂಗ್, ಎನ್ ಕೆ ಜಿತೇಂದ್ರ ಸಿಂಗ್, ಎಲ್/ಎನ್ ಕೆ ವಿವೇಕ್ ಕುಮಾರ್, ಎಲ್/ಎನ್ ಕೆ ಬಿ ಸಾಯಿ ತೇಜ, ಎಚ್ ಎವಿ ಸಾತ್ಪಾಲ್ ಅವರನ್ನ ಹೊತ್ತೊಯ್ಯುತ್ತಿತ್ತು.