ಸೋಲಿನ ಭೀತಿ: ಹೊಸ ಕ್ಷೇತ್ರದ ಹುಡುಕಾಟದಲ್ಲಿ ಸಿದ್ದು: ಬಿಎಸ್‌ವೈ

ಸೋಲಿನ ಭೀತಿ: ಹೊಸ ಕ್ಷೇತ್ರದ ಹುಡುಕಾಟದಲ್ಲಿ ಸಿದ್ದು: ಬಿಎಸ್‌ವೈ

ಮಂಗಳೂರು: ಸಿದ್ದರಾಮಯ್ಯ ಅವರು ಬಾದಾಮಿ ಕ್ಷೇತ್ರದ ಜನರ ವಿಶ್ವಾಸ, ನಂಬಿಕೆಯನ್ನು ಕಳೆದುಕೊಂಡಿದ್ದು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಹೊಸ ಕ್ಷೇತ್ರ ಹುಡುಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದರಾಮಯ್ಯ ಮೈಸೂರು, ಬಾದಾಮಿ ಬಿಟ್ಟು ಈಗ ಮತ್ತೂಂದು ಕ್ಷೇತ್ರ ಹುಡುಕುತ್ತಿದ್ದಾರೆ.ಯಾವುದೂ ಸಿಕ್ಕಿಲ್ಲ. ಹಾಗಾಗಿ ಈಗ ಕೋಲಾರ ಎಂದು ಹೇಳುತ್ತಿದ್ದಾರೆ.

ಬಾದಾಮಿಯಲ್ಲಿ ನಿಲ್ಲಲು ಹಿಂದೇಟು ಹಾಕುತ್ತಿರುವುದುರಿಂದ ಗೊತ್ತಾಗುತ್ತದೆ ಸಿದ್ದರಾಮಯ್ಯ ಅವರ ಜನಪ್ರಿಯತೆ ಎಷ್ಟಿದೆ ಎಂಬುದು ಎಂದರು.

ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್‌ನ ಹಿರಿಯ ಮುಖಂಡರು ಹಾಗೂ ಎಐಸಿಸಿ ಅಧ್ಯಕÒ‌ರು. ಅವರ ಬಗ್ಗೆ ಟೀಕೆ ಮಾಡುವುದಿಲ್ಲ ಎಂದರು.

ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, ಈಗ ಮೀಸಲಾತಿ ಹೆಚ್ಚಳಕ್ಕೆ ಎಲ್ಲರಿಂದಲೂ ಒತ್ತಾಯ ಕೇಳಿಬರುತ್ತಿದೆ. ಆ ಬಗ್ಗೆ ಮುಖ್ಯಮಂತ್ರಿಗಳು ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.