ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ; 'ಈ ಸಾಧನೆ ಮಾಡಿದ ವಿಶ್ವದ 3ನೇ ತಂಡ' ಭಾರತ, ಯಾವುದು ಆ ದಾಖಲೆ?

ಟಿ20 ವಿಶ್ವಕಪ್: ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ; 'ಈ ಸಾಧನೆ ಮಾಡಿದ ವಿಶ್ವದ 3ನೇ ತಂಡ' ಭಾರತ, ಯಾವುದು ಆ ದಾಖಲೆ?

ದುಬೈ:ಸ್ಕಾಟ್ಲೆಂಡ್ ವಿರುದ್ಧ ಭರ್ಜರಿ ಜಯ ದಾಖಲಿಸುವ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲಿ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದು, ಅತೀ ಹೆಚ್ಚು ಎಸೆತ ಇರುವಂತೆಯೇ ಜಯ ಗಳಿಸಿದ ಮೂರನೇ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.

 ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಸ್ಕಾಟ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ತಂಡ ಕೇವಲ 6.3 ಓವರ್ ನಲ್ಲಿ 2 ವಿಕೆಟ್ ಕಳೆದುಕೊಂಡು 89ರನ್ ಗಳಿಸಿ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಆ ಮೂಲಕ ಇನ್ನೂ 81 ಎಸೆತಗಳು ಬಾಕಿ ಇರುವಂತೆಯೇ ಭಾರತ ತಂಡ ಪಂದ್ಯ ಜಯಿಸಿ ಈ ಸಾಧನೆ ಮಾಡಿದ ವಿಶ್ವದ ಮೂರನೇ ತಂಡ ಎಂಬ ಕೀರ್ತಿಗೆ ಭಾಜನವಾಗಿದೆ.